ETV Bharat / state

'ಶೌಚಾಲಯವಾದ ಗಾಂಧಿ ಗಾರ್ಡನ್​​': ಸಿದ್ದರಾಮಯ್ಯ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಣದೇ ಮರೆಯಾದ ಉದ್ಯಾನ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಗುಳೇದಗುಡ್ಡ ಪಟ್ಟಣದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ರಾಷ್ಟ್ರಪಿತ ಮಹಾತ್ಮಗಾಂಧಿ ನಾಮಾಂಕಿತ ಗಾರ್ಡನ್​ವೊಂದು ಇಂದು ಅನೈತಿಕ ಚಟುವಟಿಕೆಗಳ ತಾಣವಾಗಿದ್ದು, ಸಾರ್ವಜನಿಕರಿಗೆ ಶೌಚಾಲಯವಾಗಿದೆ.

guledagudda-gandhi-park-development-word-not-done-yet
ಗಾಂಧಿ ಗಾರ್ಡನ್
author img

By

Published : Dec 26, 2020, 5:28 PM IST

ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕ್ಷೇತ್ರವಾಗಿರುವ ಗುಳೇದಗುಡ್ಡ ಪಟ್ಟಣದಲ್ಲಿ ಮಹಾತ್ಮ ಗಾಂಧೀಜಿ ಅವರ ಸ್ಮಾರಕ ಹಾಗೂ ಉದ್ಯಾನ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಇದರಿಂದ ಈಗ ಅನೈತಿಕ ಚಟುವಟಿಕೆ ತಾಣವಾಗಿರುವ ಗಾರ್ಡನ್​​ ಜೊತೆಗೆ ಅಕ್ಕಪಕ್ಕ ಜನತೆಗೆ ಶೌಚಾಲಯವಾಗಿ ಮಾರ್ಪಟ್ಟಿದೆ.

ಸಿದ್ದರಾಮಯ್ಯ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಣದೇ ಮರೆಯಾದ ಉದ್ಯಾನ

ಮಕ್ಕಳಿಗೆ, ಮಹಿಳೆಯರಿಗೆ ಹಾಗೂ ಹಿರಿಯ ವೃದ್ದರಿಗೆ ವಿಶ್ರಾಂತಿ ಮತ್ತು ವಾಯು ವಿಹಾರಕ್ಕಾಗಿ ಗುಳೇದಗುಡ್ಡ ಪಟ್ಟಣದ ಪ್ರಮುಖ ಹೃದಯ ಭಾಗದಲ್ಲಿರುವ ಮಹಾತ್ಮ ಗಾಂಧಿಯವರ ಉದ್ಯಾನವನ ಹಾಗೂ ಸ್ಮಾರಕ ಭವನವು 1952 ರಲ್ಲಿ ಕಾಮಗಾರಿ ಪ್ರಾರಂಭವಾಗಿ, 1957ರಲ್ಲಿ ಉದ್ಘಾಟನೆ ಮಾಡಲಾಗಿತ್ತು.

ಇದನ್ನೂ ಓದಿ - ಸಿಎಂ ಬದಲಾವಣೆ ಇಲ್ಲ, ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ: ರಮೇಶ್​ ಜಾರಕಿಹೊಳಿ‌

ಆದರೆ, ಕಳೆದ ವರ್ಷಗಳಿಂದ ಶಿಥಿಲಗೊಂಡ ಪರಿಣಾಮ ಸುಮಾರು 30 ಲಕ್ಷಕ್ಕೂ ಅಧಿಕ ವೆಚ್ಚದಲ್ಲಿ ಪುನರ್ ನಿರ್ಮಾಣ ಕಾರ್ಯಕ್ಕೆ ಪುರಸಭೆ ಮುಂದಾಗಿತ್ತು. ಆದರೆ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಟ್ಟಡ ಕಾಮಗಾರಿ‌ ಪೂರ್ಣಗೊಳ್ಳದೇ ಅರ್ಧಕ್ಕೆ ನಿಂತ ಪರಿಣಾಮ ಮುಳ್ಳಿನ ಗಿಡಗಳು ಬೆಳೆದಿದ್ದು, ಅನೈತಿಕ ಚಟುವಟಿಕೆ ತಾಣವಾಗಿ ಜನರಿಗೆ ಶೌಚಾಲಯವಾಗಿ ಮಾರ್ಪಟ್ಟಿದೆ.

ಸುಮಾರು ಎರಡು ಎಕರೆ ಪ್ರದೇಶದಲ್ಲಿರುವ ಈ ಉದ್ಯಾನವನ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕ್ಷೇತ್ರ ವ್ಯಾಪ್ತಿಗೆ ಬರುತ್ತದೆ. ಇದರಿಂದ ಅಭಿವೃದ್ಧಿಯ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಅವರು ತಮ್ಮ ಕ್ಷೇತ್ರದತ್ತ ಗಮನಹರಿಸಿ ಗಾರ್ಡನ್​​ನ್ನು ಅಭಿವೃದ್ಧಿ ಪಡಿಸಿ ಸಾರ್ವಜನಿಕರಿಗೆ ಉಪಯುಕ್ತವಾಗುವಂತೆ ಮಾಡಬೇಕು ಎಂಬುವುದು ಇಲ್ಲಿನ ಜನರ ಮಾತಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.