ETV Bharat / state

ಬಾಗಲಕೋಟೆ ಜಿಲ್ಲೆಯಲ್ಲಿ ಭಾರಿ ಮಳೆ: ಮನೆಗಳಿಗೆ ನುಗ್ಗಿದ ನೀರು, ಜನಜೀವನ ಅಸ್ತವ್ಯಸ್ತ - ಬಾಗಲಕೋಟೆ ಜಿಲ್ಲೆ

ಬಾಗಲಕೋಟೆ ಜಿಲ್ಲೆಯ ಕುಳಗೇರಿಯಲ್ಲಿ ನಿರಂತರ 2 ಗಂಟೆಗಳ ಕಾಲ ಮಳೆ ಸುರಿದ ಪರಿಣಾಮ ಆಹಾರ ಧಾನ್ಯ ಹಾಗೂ ಇತರ ವಸ್ತುಗಳು ನೀರು ಪಾಲಾಗಿವೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕ್ಷೇತ್ರವಾಗಿರುವ ಬಾದಾಮಿಯಲ್ಲೂ ಸಹ ಸ್ಥಳಕ್ಕೆ ಯಾವುದೇ ಅಧಿಕಾರಿಗಳು, ಸ್ಥಳೀಯ ಜನ ಪ್ರತಿನಿಧಿಗಳು ಆಗಮಿಸದಿರುವ ಬಗ್ಗೆ ಇಲ್ಲಿನ ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

bagalkote
ಬಾಗಲಕೋಟೆಯಲ್ಲಿ ಭಾರಿ ಮಳೆ
author img

By

Published : Jul 7, 2021, 6:47 AM IST

ಬಾಗಲಕೋಟೆ: ಜಿಲ್ಲೆಯಲ್ಲಿ ಹಲವೆಡೆ ಗುಡುಗು ಸಹಿತ ಮಳೆ ಅಬ್ಬರಿಸಿದ್ದು, ನೀರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಸಿದೆ. ಬಾದಾಮಿ ತಾಲೂಕಿನ ಕುಳಗೇರಿ ಗ್ರಾಮದ ಆಶ್ರಯ ಕಾಲೋನಿಯಲ್ಲಿ ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ರಾತ್ರಿಯಿಡೀ ನಿದ್ದೆಯಿಲ್ಲದೆ ಜಾಗರಣೆ ಮಾಡುವಂತಾಯಿತು.

ಕುಳಗೇರಿಯಲ್ಲಿ ನಿರಂತರ 2 ಗಂಟೆಗಳ ಕಾಲ ಮಳೆ ಸುರಿದ ಪರಿಣಾಮ ಆಹಾರ ಧಾನ್ಯ ಹಾಗೂ ಇತರ ವಸ್ತುಗಳು ನೀರು ಪಾಲಾಗಿವೆ. ಈ ಬಗ್ಗೆ ಇಲ್ಲಿನ ಜನರು ತಮ್ಮ ಸಂಕಷ್ಟ ಹೇಳಿಕೊಂಡಿದ್ದಾರೆ. ಮನೆಯೊಳಗೆ ನುಗ್ಗಿದ ನೀರನ್ನು ಹೊರಹಾಕಲು ಜನರು ಹರಸಾಹಸಪಟ್ಟರು.

ಬಾಗಲಕೋಟೆ ಜಿಲ್ಲೆಯಲ್ಲಿ ಭಾರಿ ಮಳೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕ್ಷೇತ್ರವಾಗಿದ್ದರೂ, ಯಾವುದೇ ಅಧಿಕಾರಿಗಳು, ಸ್ಥಳೀಯ ಜನ ಪ್ರತಿನಿಧಿಗಳು ಆಗಮಿಸದಿರುವ ಬಗ್ಗೆ ಇಲ್ಲಿನ ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರತಿಬಾರಿ ಮಳೆಗಾಲದಲ್ಲಿ ಇಂತಹ ಸಮಸ್ಯೆ ಎದುರಿಸಬೇಕಾಗುತ್ತದೆ. ಈ ಬಗ್ಗೆ ಜಿಪಂ, ತಾಪಂ, ಗ್ರಾಪಂ ಸದಸ್ಯರು & ಅಧಿಕಾರಿಗಳು ಗಮನಕ್ಕೆ ತಂದರೂ ಪ್ರಯೋಜನ ಆಗಿಲ್ಲ. ಈಗಲಾದರೂ ಸ್ಥಳಕ್ಕೆ ಧಾವಿಸಿ ಈ ಅವ್ಯವಸ್ಥೆ ಸರಿಪಡಿಸಲು ಸ್ಥಳೀಯರು ಆಗ್ರಹಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.