ETV Bharat / state

'ಮಹಾ' ಮಳೆಗೆ ತುಂಬಿ ಹರಿಯುತ್ತಿದೆ ಘಟಪ್ರಭಾ: ಮುಧೋಳ ಜನರಲ್ಲಿ ಪ್ರವಾಹ ಭೀತಿ

ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಘಟಪ್ರಭಾ ನದಿಗೆ ಸಾಕಷ್ಟು ನೀರು ಹರಿದು ಬರುತ್ತಿದೆ. ಇದರಿಂದಾಗಿ ಮುಧೋಳ ತಾಲೂಕಿನ ಕೆಲ ಗ್ರಾಮಗಳ ಜನರಲ್ಲಿ ಪ್ರವಾಹ ಭೀತಿ ಆವರಿಸಿದೆ.

Heavy rains in Maharashtra: flood threat in Mudhola
ಮಹಾರಾಷ್ಟ್ರದಲ್ಲಿ ಭಾರಿ ಮಳೆಗೆ ತುಂಬಿ ಹರಿಯುತ್ತಿದೆ ಘಟಪ್ರಭಾ: ಮುಧೋಳ ಜನರಲ್ಲಿ ಪ್ರವಾಹ ಭೀತಿ
author img

By

Published : Aug 7, 2020, 7:31 PM IST

ಬಾಗಲಕೋಟೆ: ಮಹಾರಾಷ್ಟ್ರದಲ್ಲಿ ಜಡಿ ಮಳೆಯಾಗುತ್ತಿದ್ದು, ಜಿಲ್ಲೆಯ ಘಟಪ್ರಭಾ ನದಿಗೆ ಬೃಹತ್‌ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಪರಿಣಾಮ, ಮುಧೋಳ ತಾಲೂಕಿನ ಕೆಲ ಗ್ರಾಮಗಳಲ್ಲಿ ಪ್ರವಾಹ ಭೀತಿ ಉಂಟಾಗಿದೆ.

ಮಹಾರಾಷ್ಟ್ರದಲ್ಲಿ ಭಾರಿ ಮಳೆಗೆ ತುಂಬಿ ಹರಿಯುತ್ತಿದೆ ಘಟಪ್ರಭಾ: ಮುಧೋಳ ಜನರಲ್ಲಿ ಪ್ರವಾಹ ಭೀತಿ

ಮಳೆ ನೀರು ನುಗ್ಗಿ ಮುಧೋಳ ತಾಲೂಕಿನ ಮಾಚಕನೂರ ಗ್ರಾಮದಲ್ಲಿರುವ ಬಸವೇಶ್ವರ ದೇವಸ್ಥಾನ ಈಗಾಗಲೇ ಮುಳುಗಡೆಯಾಗಿದೆ. ಧವಳೇಶ್ವರ, ಉತ್ತೂರು, ಜಾಲಿಬೇರಿ ಸೇರಿದಂತೆ ಇತರ ಗ್ರಾಮಗಳಲ್ಲೂ ಪ್ರವಾಹದ ಭಯವಿದೆ.

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ನಾಳೆ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪ್ರವಾಹ ಭೀತಿ ಇರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.