ETV Bharat / state

ಕಾಂಗ್ರೆಸ್‌ನಿಂದ ಮತ್ತೆ ಲೋಕಸಭೆಗೆ ಸ್ಪರ್ಧಿಸುವ ಬಯಕೆ ವ್ಯಕ್ತಪಡಿಸಿದ ವೀಣಾ ಕಾಶಪ್ಪನವರ

ಜನಸೇವೆ ಮಾಡಲು ಅಧಿಕಾರ ಬೇಕು. ಹೀಗಾಗಿ, ನಾನು ಮತ್ತೊಮ್ಮೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದೇನೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ‌ ಅಧ್ಯಕ್ಷೆ ವೀಣಾ ಕಾಶಪ್ಪನವರ ತಿಳಿಸಿದರು.

i-want-to-contest-lok-sabha-election-from-congress-party-says-veena-kashapanavara
ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಬಯಸಿದ್ದೇನೆ: ವೀಣಾ ಕಾಶಪ್ಪನವರ ಹೇಳಿಕೆ
author img

By ETV Bharat Karnataka Team

Published : Aug 22, 2023, 4:34 PM IST

Updated : Aug 22, 2023, 5:39 PM IST

ಜಿಲ್ಲಾ ಪಂಚಾಯಿತಿ ಮಾಜಿ‌ ಅಧ್ಯಕ್ಷೆ ವೀಣಾ ಕಾಶಪ್ಪನವರ

ಬಾಗಲಕೋಟೆ: "ನಾನು ಈ ಬಾರಿ ಕಾಂಗ್ರೆಸ್ ಪಕ್ಷದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದೇನೆ" ಎಂದು ಜಿಲ್ಲಾ ಪಂಚಾಯಿತಿ ಮಾಜಿ‌ ಅಧ್ಯಕ್ಷೆ ವೀಣಾ ಕಾಶಪ್ಪನವರ ಹೇಳಿದ್ದಾರೆ. ನವನಗರದ ‌ಪ್ರತಿಕಾ ಭವನದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಕಳೆದ ಬಾರಿ ಕೆಲವೇ ಮತಗಳ ಅಂತರದಲ್ಲಿ ಸೋತಿರುವುದರಿಂದ ಮತ್ತೆ ಹೈಕಮಾಂಡ್​, ರಾಜ್ಯ ಮತ್ತು ಜಿಲ್ಲಾ ನಾಯಕರು ನನ್ನ ಸ್ಪರ್ಧೆಗೆ ಅವಕಾಶ ಮಾಡಿಕೊಡುತ್ತಾರೆ" ಎಂಬ ಭರವಸೆ ಇದೆ ಎಂದರು.

"ಚುನಾವಣೆ ಕೆಲಸ ಪ್ರಾರಂಭಿಸಿದ್ದೇನೆ. ಜಿಲ್ಲೆಯ ಪ್ರತಿಯೊಂದು ಹಳ್ಳಿಯಲ್ಲೂ ಸಂಚಾರ ಮಾಡಿದ್ದೇನೆ. ನನಗೆ ಅಧಿಕಾರ ಮುಖ್ಯ ಅಲ್ಲ, ಜನಸೇವೆ ಮುಖ್ಯ" ಎಂದು ಹೇಳಿದರು.

"ಜಿಲ್ಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಕೆಎಎಸ್, ಐಎಎಸ್ ಮತ್ತು ಪಿಎಸ್​ಐ ಪರೀಕ್ಷೆಗೆ ತರಬೇತಿ ನೀಡಲು ವೀಣಾ ವಿ. ಕಾಶಪ್ಪನವರ ಫೌಂಡೇಶನ್ ಸ್ಥಾಪಿಸಲಾಗಿದೆ. ಆಯ್ದ ವಿದ್ಯಾರ್ಥಿಗಳಿಗೆ ಉಚಿತವಾಗಿ ತರಬೇತಿ ನೀಡಲಿದ್ದೇವೆ. ನನ್ನ ಜನ್ಮದಿನದ ಅಂಗವಾಗಿ ಫೌಂಡೇಶನ್ ಸ್ಥಾಪನೆ ಮಾಡಲಾಗಿದೆ. ಸುಮಾರು 100 ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತದೆ. ಜಿಲ್ಲೆಯ ಬಡ, ಮಧ್ಯಮ ವರ್ಗದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಫೌಂಡೇಶನ್ ಅನ್ನು ಅಸ್ತಿತ್ವಕ್ಕೆ ತರಲಾಗಿದೆ" ಎಂದು ತಿಳಿಸಿದರು.

ಬಾಗಲಕೋಟೆಯ ಕೇಂದ್ರಗಳಲ್ಲಿ 100 ಅಂಕಗಳ ಪ್ರವೇಶ ಪರೀಕ್ಷೆಯ ಮೂಲಕ ವಿದ್ಯಾರ್ಥಿಗಳನ್ನು ಉಚಿತ ತರಬೇತಿಗೆ ಆಯ್ಕೆ ಮಾಡಲಾಗುವುದು. ಬಾಗಲಕೋಟೆ ಜಿಲ್ಲೆಯ ವಿದ್ಯಾರ್ಥಿಗಳು ಮಾತ್ರ ತರಬೇತಿಗೆ ನೋಂದಣಿ ಮಾಡಿಕೊಳ್ಳಲು ಅವಕಾಶವಿದೆ. ಅಕ್ಟೋಬರ್​ 15 ರಿಂದ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಸೆಪ್ಟೆಂಬರ್ 14 ರಿಂದ ಅರ್ಜಿ ಸಲ್ಲಿಕೆಯ ಪ್ರಕ್ರಿಯೆ ಪ್ರಾರಂಭವಾಗಲಿದೆ. ಸೆ.30 ಅರ್ಜಿ ಸಲ್ಲಿಕೆಗೆ ಕೊನೆಯ ದಿನ. ಆನ್‌ಲೈನ್ ಮೂಲಕ 15 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು ಅರ್ಜಿ ಹಾಕಬಹುದು. ಹೆಚ್ಚಿನ ಮಾಹಿತಿಗೆ ಮೊಬೈಲ್​ ಸಂಖ್ಯೆ 6362234301, 8904624441 ಅನ್ನು ಸಂಪರ್ಕಿಸುವಂತೆ ವೀಣಾ ಕಾಶಪ್ಪನವರ ಮಾಹಿತಿ ನೀಡಿದರು.

ಇದನ್ನೂ ಓದಿ: ಬಾಗಲಕೋಟೆಯಲ್ಲಿ ಒಂದೇ ಹುದ್ದೆಗೆ ಇಬ್ಬರು ಜಿಲ್ಲಾ ಆರೋಗ್ಯ ಅಧಿಕಾರಿಗಳ ಹಗ್ಗಜಗ್ಗಾಟ!

ಈ ಹಿಂದೆ ಮಾತನಾಡಿದ್ದ ಜಿಪಂ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ, ಮುಂಬರುವ ಲೋಕಸಭಾ ಚುನಾವಣೆಗೆ ಬಾಗಲಕೋಟೆ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಕಳೆದ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ 5 ಲಕ್ಷ ಮತಗಳನ್ನು ಪಡೆದುಕೊಂಡಿದ್ದೆ ಈಗ ಮತ್ತೆ ಸ್ಪರ್ಧೆ ಮಾಡುತ್ತೇನೆ. ಕಳೆದ ಚುನಾವಣೆ ಸಂದರ್ಭದಲ್ಲಿ ಎರಡು ವಿಧಾನ ಸಭಾ ಮತಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಪಕ್ಷದ ಶಾಸಕರು ಇದ್ದರು. ಆದರೆ, ಈಗ ಐದು ವಿಧಾನಸಭಾ ಮತಕ್ಷೇತ್ರದಲ್ಲಿ ನಮ್ಮ ಪಕ್ಷದ ಶಾಸಕರು ಇದ್ದು ನನಗೆ ಸಂಪೂರ್ಣ ಬೆಂಬಲ ದೊರೆಯುವ ನಿರೀಕ್ಷೆ ಹೊಂದಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.

ಈಗಾಗಲೇ ನಾನು ಬಾಗಲಕೋಟೆ ಜಿಪಂ ಅಧ್ಯಕ್ಷೆಯಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದೇನೆ. ಉತ್ತಮವಾಗಿ ಕೆಲಸ ಮಾಡಿದ್ದು, ಪ್ರವಾಹ ಸಂದರ್ಭದಲ್ಲಿ ರೈತರ ಸಮಸ್ಯೆಗಳಿಗೆ ಜಿಪಂದಿಂದ ನೆರವು ನೀಡಿದ್ದೇನೆ. ಜಿಲ್ಲಾಸ್ಪತ್ರೆಯಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೆನು. ನನ್ನ ಅವಧಿಯಲ್ಲಿ ಹಲವು ಸಮಸ್ಯೆಗಳನ್ನು ಪರಿಹರಿಸಿದ್ದೇನೆ ಎಂದು ಹೇಳಿದ್ದರು.

Last Updated : Aug 22, 2023, 5:39 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.