ಬಾಗಲಕೋಟೆ: ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಪೊಲೀಸ್ ಠಾಣೆಗೆ ತಾವೇ ಹೋಗಿ ಗಲಾಟೆ ಮಾಡಿದ್ದು, ವಿನಾಕಾರಣ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ಹೀಗೆ ಪದೇ ಪದೆ ಸುಳ್ಳು ಆರೋಪ ಮಾಡಿದರೆ ಮಾನನಷ್ಟ ಮೊಕದ್ದಮೆ ಹೂಡಬೇಕಾಗುತ್ತದೆ ಎಂದು ಹುನಗುಂದ ಕ್ಷೇತ್ರದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ 'ಈಟಿವಿ ಭಾರತ'ದೊಂದಿಗೆ ಮಾತನಾಡಿದ ಅವರು, ವಿಜಯಾನಂದ ಕಾಶಪ್ಪನವರ್ ಪೊಲೀಸ್ ಠಾಣೆಗೆ ಹೋಗಿ ಗದ್ದಲ ಮಾಡಲು ನಾನು ಹೇಳಿದ್ದೇನಾ? ಎಂದು ಪ್ರಶ್ನಿಸಿದರು. ಕಾನೂನು ಪ್ರಕಾರ ಎಲ್ಲರೂ ಒಂದೇ. ಯಾರೇ ತಪ್ಪು ಮಾಡಿದರು ಅವರಿಗೆ ಶಿಕ್ಷೆ ಆಗಲೇಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ: ಪೊಲೀಸರಿಗೆ ಧಮ್ಕಿ ಹಾಕಿರುವ ವಿಡಿಯೋ ವೈರಲ್; ಮಾಜಿ ಶಾಸಕನ ವಿರುದ್ಧ ಎಫ್ಐಆರ್
ಮಾಜಿ ಶಾಸಕರು ಪೊಲೀಸ್ ಠಾಣೆಗೆ ಹೋಗಿ ಆವಾಜ್ ಹಾಕಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಜರುಗಿಸಿ, ಶಿಕ್ಷೆ ನೀಡಬೇಕು ಎಂದು ಶಾಸಕ ಪಾಟೀಲ್ ಹೇಳಿದ್ರು.