ETV Bharat / state

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ನೂರಕ್ಕೆ ನೂರು ಅಧಿಕಾರಕ್ಕೆ ಬರಲಿದೆ: ಸಿದ್ದರಾಮಯ್ಯ

author img

By

Published : Jan 4, 2021, 9:22 PM IST

Updated : Jan 4, 2021, 11:33 PM IST

ಬಿಜೆಪಿ ಸರ್ಕಾರ ಪಂಚಾಯಿತಿಗೆ ಅನುದಾನ ಕೊಡ್ತಿಲ್ಲ ಎಂದು ಆರೋಪಿಸಿದ ಅವರು, ಅಕ್ಕಿ 7 ಕೆ.ಜಿಯಿಂದ 5 ಕೆ.ಜಿಗೆ ಇಳಿಸಿದ್ದಾರೆ‌‌. ನಾವು ಮತ್ತೆ ಅಧಿಕಾರಕ್ಕೆ ಬಂದ್ರೆ 10 ಕೆ.ಜಿ ಅಕ್ಕಿ ಕೊಡುತ್ತೇವೆ. ನಾನು ಜಾರಿ ಮಾಡಿದ ಯೋಜನೆ ನಿಲ್ಲಿಸಿದ್ದಾರೆ. ಇಂದಿರಾ ಕ್ಯಾಂಟಿನ್ ನಿಲ್ಲಿಸಲು ಹೊರಟಿದ್ದಾರೆ. ಸಾಲ ಮನ್ನಾ ಮಾಡಿದ್ದು ಕಾಂಗ್ರೆಸ್. ಬಿಜೆಪಿ ಸರ್ಕಾರ ಮಾನ ಮರ್ಯಾದೆ ಇಲ್ಲದ ಲಜ್ಜೆಗೆಟ್ಟವರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.

in-the-next-election-the-congress-will-come-to-power-former-cm-sidhu
ಮಾಜಿ ಸಿಎಂ ಸಿದ್ದು

ಬಾಗಲಕೋಟೆ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಹೆಚ್ಚು ಗೆದ್ದಿರುವುದರ ಅರ್ಥ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಬಾದಾಮಿ ಪಟ್ಟಣದ ತಮ್ಮ ಗೃಹ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ನೂತನವಾಗಿ ಆಯ್ಕೆಯಾಗಿರುವ ಗ್ರಾಮ ಪಂಚಾಯಿತಿ ಸದಸ್ಯರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಗ್ರಾ.ಪಂ ಚುನಾವಣೆಗೆ ಇನ್ನೂ ಎಣಿಕೆಯೇ ಮುಗಿದಿರಲಿಲ್ಲ. ಆಗಲೇ 60ರಷ್ಟು ಗ್ರಾ.ಪಂ ಗೆದ್ದಿದ್ದೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ‌ ಹೇಳಿದ್ದಾರೆ. ಮುಖ್ಯಮಂತ್ರಿಯಾಗಿ ಸುಳ್ಳು ಹೇಳಬಾರದು. ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರು ಗೆದ್ದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನೂರಕ್ಕೆ ನೂರು ಅಧಿಕಾರಕ್ಕೆ ಬರುತ್ತದೆ ಎಂದರು.

ಗ್ರಾಮ ಪಂಚಾಯಿತಿ ಸದಸ್ಯರ ಅಭಿನಂದನಾ ಸಮಾರಂಭ

ಗ್ರಾಮ ಪಂಚಾಯಿತಿ ಚುನಾವಣೆ ಗೆದ್ದರೆ ಪಾರ್ಲಿಮೆಂಟ್​ ಸುಲಭವಾಗಿ ಗೆಲ್ಲಬಹುದು. ಅಧ್ಯಕ್ಷರಾದವರು ಪಂಚಾಯಿತಿ ಯಜಮಾನರಾಗಬೇಕು. ಪಿಡಿಒ ಹಿಂದೆ ಹೋಗ್ಬೇಡಿ. ಮಹಿಳಾ ಸದಸ್ಯರ ಬದಲಿಗೆ ಗಂಡಂದಿರು ದರ್ಬಾರ್ ಮಾಡೋಕೆ ಹೋಗ್ಬೇಡಿ ಎಂದು‌ ಕಿವಿಮಾತು‌ ಹೇಳಿದರು.

ಬಿಜೆಪಿ ಸರ್ಕಾರ ಪಂಚಾಯಿತಿಗೆ ಅನುದಾನ ಕೊಡ್ತಿಲ್ಲ ಎಂದು ಆರೋಪಿಸಿದ ಅವರು, ಅಕ್ಕಿ 7 ಕೆ.ಜಿಯಿಂದ 5 ಕೆ.ಜಿಗೆ ಇಳಿಸಿದ್ದಾರೆ‌‌. ನಾವು ಮತ್ತೆ ಅಧಿಕಾರಕ್ಕೆ ಬಂದ್ರೆ 10 ಕೆ.ಜಿ ಅಕ್ಕಿ ಕೊಡುತ್ತೇವೆ. ನಾನು ಜಾರಿ ಮಾಡಿದ ಯೋಜನೆ ನಿಲ್ಲಿಸಿದ್ದಾರೆ. ಇಂದಿರಾ ಕ್ಯಾಂಟಿನ್ ನಿಲ್ಲಿಸಲು ಹೊರಟಿದ್ದಾರೆ. ಸಾಲ ಮನ್ನಾ ಮಾಡಿದ್ದು ಕಾಂಗ್ರೆಸ್. ಬಿಜೆಪಿ ಸರ್ಕಾರ ಮಾನ ಮರ್ಯಾದೆ ಇಲ್ಲದ ಲಜ್ಜೆಗೆಟ್ಟವರು ಎಂದು ಕಿಡಿಕಾರಿದರು.

ಗ್ರಾಮ ಪಂಚಾಯಿತಿ ಚುನಾವಣೆಯಲ್ಲೂ ಆಪರೇಷನ್ ಕಮಲ ಮಾಡ್ತಾರೆ ಹುಷಾರಾಗಿರಿ. ಇನ್ನೆರಡು ವರ್ಷ ಕಾಯಿರಿ, ನಮ್ಮದೇ ಸರ್ಕಾರ ಬರುತ್ತೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರೋದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಇನ್ನೆರಡು ವರ್ಷ ರಾಜ್ಯದಲ್ಲಿ ಗಬ್ಬೆಬ್ಬಿಸಿಬಿಡ್ತಾರೆ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಇದೇ ಸಮಯದಲ್ಲಿ ಕಾಂಗ್ರೆಸ್ ಬೆಂಬಲಿತ ನೂತನ ಸದಸ್ಯರಿಗೆ ಸಿದ್ದರಾಮಯ್ಯ, ಎಸ್​.ಆರ್.ಪಾಟೀಲ್, ಹೆಚ್.​ವೈ.ಮೇಟಿ ಸೇರಿದಂತೆ ಇತರ ಮುಖಂಡರ ಉಪಸ್ಥಿತಿಯಲ್ಲಿ ಸನ್ಮಾನ ಮಾಡಲಾಯಿತು.

Last Updated : Jan 4, 2021, 11:33 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.