ಬಾಗಲಕೋಟೆ: ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಆತಂಕ ಮೂಡಿಸಿದೆ.
ಈ ಕಾರಣಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು, ಆಶಾ ಕಾರ್ಯಕರ್ತೆ ಸೇರಿದಂತೆ ಇತರ ಸಿಬ್ಬಂದಿ ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿ, ಸರ್ವೆ ಕಾರ್ಯ ನಡೆಸುತ್ತಿದ್ದಾರೆ.
ಈ ಮಧ್ಯೆ ಮುರನಾಳ ಗ್ರಾಮದಲ್ಲಿ ಅಂದಾಜು 25 ಕ್ಕೂ ಹೆಚ್ಚು ಜನರಿಗೆ ಕೊರೊನಾ ಸೊಂಕು ತಗುಲಿದೆ. ಅದರಲ್ಲಿ ಒಂದೇ ಮನೆಯ 11 ಜನರಿಗೆ ಕೊರೊನಾ ಆವರಿಸಿದೆ.
ಸೋಂಕಿನ ಹಿನ್ನೆಲೆ ಮುರನಾಳ ಗ್ರಾಮಕ್ಕೆ ಭೇಟಿ ನೀಡಿದ ಎಸಿ ಗಂಗಪ್ಪ ನೇತೃತ್ವದ ಅಧಿಕಾರಿಗಳ ತಂಡ, ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಇಡೀ ಗ್ರಾಮದಲ್ಲಿ ಗಂಟಲು ಮಾದರಿ ಪರೀಕ್ಷೆ ನಡೆಸಿದ್ದು, ವೈದ್ಯಕೀಯ ಸಿಬ್ಬಂದಿ ಜಾಗೃತಿ ಮೂಡಿಸುವ ಕಾರ್ಯ ನಡೆಸಿದ್ದಾರೆ.
ಇನ್ನು ಒಂದೇ ಮನೆಯ 11 ಜನ ಸೋಂಕಿತರನ್ನ ನವನಗರದ ಕೋವಿಡ್ ಕೇರ್ ಸೆಂಟರ್ಗೆ ಶಿಪ್ಟ್ ಮಾಡಲಾಗಿದೆ. ಮನೆಯ ಸುತ್ತ ಕಂಟೋನ್ಮೆಂಟ್ ಝೋನ್ ಎಂದು ಘೋಷಣೆ ಮಾಡಿ,ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.