ETV Bharat / state

ಅಂತಾರಾಷ್ಟ್ರೀಯ ಕರಾಟೆ ಪಟು ನಾಗಪ್ಪ ತಳವಾರರಿಗೆ ಜಿಲ್ಲಾಡಳಿತದಿಂದ ಸನ್ಮಾನ

author img

By

Published : May 27, 2019, 9:38 PM IST

ನಾಗಪ್ಪ ತಳವಾರರವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆದ ಕರಾಟೆ ಚಾಂಪಿಯನ್‍ಶಿಪ್‍ನಲ್ಲಿ 4 ಚಿನ್ನದ ಪದಕಗಳನ್ನು ಗಳಿಸಿರುವುದರ ಜೊತೆಗೆ ರಾಜ್ಯ ಮಟ್ಟದಲ್ಲಿ 1, ರಾಷ್ಟ್ರ ಮಟ್ಟದಲ್ಲಿ 2 ಚಿನ್ನದ ಪದಕಗಳನ್ನು ಪಡೆದುಕೊಂಡು ಬಾಗಲಕೋಟೆ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ.

ಅಂತರಾಷ್ಟ್ರೀಯ ಕರಾಟೆ ಪಟು ನಾಗಪ್ಪ ತಳವಾರ

ಬಾಗಲಕೋಟೆ: ಮಲೇಶಿಯಾದಲ್ಲಿ ಇತ್ತೀಚೆಗೆ ನಡೆದ 16ನೇ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‍ಶಿಪ್‍ನಲ್ಲಿ ಚಿನ್ನದ ಪದಕ ಪಡೆದ ಇಲಕಲ್ ನಗರದ ಕರಾಟೆ ಪಟು ನಾಗಪ್ಪ ತಳವಾರ ಅವರನ್ನು ಇಂದು ಜಿಲ್ಲಾಡಳಿತದಿಂದ ಸನ್ಮಾನಿಸಲಾಯಿತು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆದ ಕರಾಟೆ ಚಾಂಪಿಯನ್‍ಶಿಪ್‍ನಲ್ಲಿ 4 ಚಿನ್ನದ ಪದಕಗಳನ್ನು ಗಳಿಸಿರುವುದು ಹೆಮ್ಮೆಯ ಸಂಗತಿ. ಇದರ ಜೊತೆಗೆ ನಾಗಪ್ಪ ತಳವಾರರವರು ರಾಜ್ಯ ಮಟ್ಟದಲ್ಲಿ 1, ರಾಷ್ಟ್ರ ಮಟ್ಟದಲ್ಲಿ 2 ಚಿನ್ನದ ಪದಕಗಳನ್ನು ಪಡೆದುಕೊಂಡು ಬಾಗಲಕೋಟೆ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ. ಅವರು ಜಿಲ್ಲೆಯ ಇತರೆ ಕ್ರೀಡಾಪಟುಗಳಿಗೆ ಪ್ರೇರಣೆಯಾಗಲಿ ಎಂಬ ಉದ್ದೇಶದಿಂದ ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಲಾಗುತ್ತಿದೆ ಎಂದು ತಿಳಿಸಿದರು.

ನಾಗಪ್ಪ ಅವರಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಪ್ರೋತ್ಸಾಹಧನವಾಗಿ ರೂ.20 ಸಾವಿರ, ಕೂಡಲಸಂಗಮ ಗ್ರಾಮ ಪಂಚಾಯತಿ ವತಿಯಿಂದ ಕ್ರೀಡಾ ಚುಟುವಟಿಕೆಗಳಿಗೆ ಮೀಸಲಿಡಲಾದ ಅಭಿವೃದ್ದಿ ಅನುದಾನದಲ್ಲಿ ರೂ.10 ಸಾವಿರ ಹಾಗೂ ಕ್ರೀಡಾ ಇಲಾಖೆಯ ಕಾರ್ಯಕ್ರಮಗಳಿಗಾಗಿ ಮೀಸಲಿಡಲಾದ ಅನುದಾನದಲ್ಲಿ ರೂ.10 ಸಾವಿರಗಳ ಸಹಾಯಧನ ನೀಡಲು ಕ್ರಮಕೈಗೊಳ್ಳಲಾಗುವುದು. ರಾಜ್ಯ ವಲಯದ ಯಾವುದಾದರೊಂದು ಯೋಜನೆಯಲ್ಲಿ ನಗದು ಪುರಸ್ಕಾರ, ಎಸ್‍ಸಿಪಿ, ಟಿಎಸ್‍ಪಿ ಯೋಜನೆ ಅಡಿಯಲ್ಲಿ ಸಹಾಯಧನ ಮಂಜೂರು ಮಾಡಲು ಕ್ರೀಡಾ ಇಲಾಖೆಗೆ ಈಗಾಗಲೇ ಶಿಫಾರಸ್ಸು ಮಾಡಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಬರುವ ನವೆಂಬರ 1 ರ ಕನ್ನಡ ರಾಜ್ಯೋತ್ಸವ ದಿನದಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹನೀಯರ ಸನ್ಮಾನದ ಪಟ್ಟಿಯಲ್ಲಿ ಕರಾಟೆ ಪಟು ನಾಗಪ್ಪನನ್ನು ಪರಿಗಣಿಸಿ ಸನ್ಮಾನಿಸುವಂತೆ ತಿಳಿಸಿದರು.

ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ವಿವಿಧ ಕ್ರೀಡೆಯಲ್ಲಿ ಖ್ಯಾತಿ ಪಡೆದ ಕ್ರೀಡಾಪಟುಗಳನ್ನು ಗುರುತಿಸಿ ಅವರು ಪಡೆದ ಪದಕ ಹಾಗೂ ಪ್ರಶಸ್ತಿ ಪತ್ರಗಳೊಂದಿಗೆ ಕರೆದು ಸನ್ಮಾನಿಸಲಾಗುವುದು. ಅಲ್ಲದೇ ಕ್ರೀಡಾ ಸಚಿವರು ಜಿಲ್ಲೆಗೆ ಆಗಮಿಸಿದ ಸಂದರ್ಭದಲ್ಲಿ ಸರ್ಕಾರದಿಂದ ಕೊಡಲಾಗುತ್ತಿರುವ ನಗದು ಹಾಗೂ ಪುರಸ್ಕಾರಗಳನ್ನು ಸಚಿವರಿಂದ ಕೊಡಿಸಲಾಗುವುದೆಂದರು. ಕ್ರೀಡಾಪಟುಗಳು ಇಂತಹ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವುದರ ಜೊತೆಗೆ ಕ್ರೀಡೆಗಳಲ್ಲಿ ತಾವು ಬೆಳೆಯುವುದ ಜೊತೆಗೆ ಇನ್ನಿತರ ಕ್ರೀಡಾಪಟುಗಳನ್ನು ಬೆಳೆಸಿ, ತಮ್ಮಂತೆ ಅವರನ್ನು ಕೂಡ ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟದವರಗೆ ಪ್ರತಿನಿಧಿಸುವಂತಾಗಬೇಕು ಎಂದರು.

ಈ ಸಂದರ್ಭದಲ್ಲಿ ಜಿ.ಪಂ. ಸಿಇಒ ಗಂಗೂಬಾಯಿ ಮಾನಕರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಭಾರಿ ಸಹಾಯಕ ನಿರ್ದೇಶಕ ಎಂ.ಎಂ.ಮೇಲಿನಮನಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

sample description

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.