ETV Bharat / state

ಚುನಾವಣೆ ಆಮಿಷ.. ಅಕ್ರಮವಾಗಿ ಸಾಗಿಸುತ್ತಿದ್ದ 60 ಲಕ್ಷ ಮೌಲ್ಯದ ಇಸ್ತ್ರಿ ಪೆಟ್ಟಿಗೆಗಳು ಜಪ್ತಿ - ತನಿಖೆ ಚುರುಕು

ಬಾಗಲಕೋಟೆ ನಗರದ ಹೊರವಲಯದ ಮಹಾರುದ್ರಪ್ಪನ ಹಳ್ಳದ ಬಳಿ ಕ್ಯಾಂಟರ್ ವಾಹನ ಮೇಲೆ ನಗರ ಪೊಲೀಸರು ದಾಳಿ ಮಾಡಿ, ಅಕ್ರಮವಾಗಿ ಸಾಗಿಸುತ್ತಿದ್ದ 60 ಲಕ್ಷ ಮೌಲ್ಯದ 6798 ಇಸ್ತ್ರಿ ಪೆಟ್ಟಿಗೆಗಳನ್ನು ವಶಕ್ಕೆ ಪಡೆದಿದ್ದಾರೆ. ವಾಹನ ಚಾಲಕನನ್ನು ವಶಕ್ಕೆ ಪಡೆದು ತನಿಖೆ ಚುರುಕುಗೊಳಿಸಿದ್ದಾರೆ.

6798 iron boxes were seized illegally
ಅಕ್ರಮ ಸಾಗಿಸುತ್ತಿದ್ದ 6798 ಇಸ್ತ್ರಿ ಪೆಟ್ಟಿಗೆಗಳನ್ನು ವಶಕ್ಕೆ ಪಡೆದ ಪೊಲೀಸರು
author img

By

Published : Mar 26, 2023, 10:44 PM IST

ಬಾಗಲಕೋಟೆ: cಉನಾವಣೆ ಹತ್ತಿರ ಬರುತ್ತಿದ್ದಂತೆ ಮತದಾರರಿಗೆ ವಿವಿಧ ಆಮಿಷಗಳನ್ನೊಡ್ಡಿ ಸೆಳೆಯುವ ಪ್ರಕರಣಗಳು ಅಲ್ಲಲ್ಲಿ ವರದಿಯಾಗುತ್ತಿವೆ. ಇದೀಗ ಲಕ್ಷಾಂತರ ಮೌಲ್ಯದ ಇಸ್ತ್ರಿ ಪೆಟ್ಟಿಗೆಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ವಾಹನವನ್ನು ಬಾಗಲಕೋಟೆ ಎಸ್.ಪಿ ಜಯಪ್ರಕಾಶ್ ನೇತೃತ್ವದ ಪೊಲೀಸರ ತಂಡ ದಾಳಿ ಮಾಡಿ ವಶಕ್ಕೆ ಪಡೆದುಕೊಂಡಿದೆ. ನಗರದ ಹೊರವಲಯದ ಮಹಾರುದ್ರಪ್ಪನ ಹಳ್ಳದ ಬಳಿ ಜಿಲ್ಲೆಯ ಪ್ರತಿಷ್ಠಿತ ರಾಜಕೀಯ ನಾಯಕರಿಗೆ ಸೇರಿದ ಇಸ್ತ್ರಿ ಪೆಟ್ಟಿಗೆಗಳು ಇರಬಹುದೆಂಬ ಶಂಕೆ ಬಂದ ಹಿನ್ನೆಲೆ ಕ್ಯಾಂಟರ್ ವಾಹನ ಮೇಲೆ ಬಾಗಲಕೋಟೆ ನಗರದ ಪೊಲೀಸರು ದಾಳಿ ಮಾಡಿದ್ದು, 6798 ಇಸ್ತ್ರಿ ಪೆಟ್ಟಿಗೆಗಳನ್ನು ಜಪ್ತಿ ಮಾಡಿದ್ದಾರೆ.

6798 ಇಸ್ತ್ರಿ ಪೆಟ್ಟಿಗೆ ಜಪ್ತಿ: ಈ ವೇಳೆ ಕ್ಯಾಂಟರ್ ವಾಹನ ಪರಿಶೀಲಿಸಿದ ಪೊಲೀಸರು, ಅಂದಾಜು 60 ಲಕ್ಷ ಮೌಲ್ಯದ 6798 ಇಸ್ತ್ರಿ ಪೆಟ್ಟಿಗೆಗಳು ಇರುವುದು ಪತ್ತೆಯಾಗಿವೆ. ವಾಹನದ ಚಾಲಕನ ಬಳಿ ಸಮರ್ಪಕ ಬಿಲ್​ ಇಲ್ಲದಿರುವ ಮಾಹಿತಿ ಬಂದಿದ್ದು, ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ರಾಜಕೀಯ ನಾಯಕರ ಮೇಲೆ ಶಂಕೆ: ಜಿಲ್ಲೆಯ ಪ್ರತಿಷ್ಠಿತ ರಾಜಕೀಯ ನಾಯಕರಿಗೆ ಸೇರಿದ ಇಸ್ತ್ರಿ ಪೆಟ್ಟಿಗೆಗಳು ಇರಬಹುದೆಂಬ ಸಂಶಯ ಹಿನ್ನೆಲೆ ಪೊಲೀಸರು ದಾಳಿ ಮಾಡಿರುವುದು ಬೆಳಕಿಗೆ ಬಂದಿದೆ. ಮತದಾರರಿಗೆ ಆಮಿಷ ಒಡ್ಡಲು ಇಸ್ತ್ರಿ ಪೆಟ್ಟಿಗಳನ್ನು ಹಂಚಲಾಗುತ್ತಿದೆ ಎಂಬ ಆರೋಪವೂ ಇತ್ತು. ಈ ಹಿನ್ನೆಲೆ ಕ್ಯಾಂಟರ್ ವಾಹನ ವಾಹನ ಚಾಲಕನನ್ನು ವಶಕ್ಕೆ ತೆಗೆದುಕೊಂಡು ಪೊಲೀಸ್​ರು ತನಿಖೆ ನಡೆಸಿದ್ದಾರೆ.

ಬೀಳಗಿ ಮತಕ್ಷೇತ್ರದಲ್ಲಿ ಇಸ್ತ್ರಿ ಪೆಟ್ಟಿಗೆ ಹಂಚಿಕೆ ಮಾಡಿರುವ ಬಗ್ಗೆ ಸಹ ಆರೋಪಗಳು ಕೇಳಿ ಬಂದಿದ್ದವು. ‌ಪಕ್ಷವೊಂದರ ಕಾರ್ಯಕರ್ತರು ಮನೆ ಮನೆಗೆ ತೆರಳಿ ಹಂಚುತ್ತಿದ್ದ ವೇಳೆ ರೈತರು ತಡೆಯೊಡ್ಡಿದ್ದರು. ಈ ಇಸ್ತ್ರಿ ಪೆಟ್ಟಿಗೆಗಳನ್ನು ಬೀಳಗಿ ಮತಕ್ಷೇತ್ರಕ್ಕೆ ಸಾಗಿಸುತ್ತಿರುವ ಬಗ್ಗೆ ವಿವಿಧ ಮೂಲಗಳಿಂದ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

16 ಲಕ್ಷ ರೂ ನಗದು ವಶ: ಈ ಮಧ್ಯೆ ಮತ್ತೊಂದು ಪ್ರಕರಣದಲ್ಲಿ ಅಮೀನಗಡ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಸಾಗುತ್ತಿದ್ದ 16 ಲಕ್ಷ ನಗದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಮೀನಗಡ ಮೂಲಕ ಗುಡೂರ ಗ್ರಾಮಕ್ಕೆ ಸಾಗಿಸುತ್ತಿದ್ದ ಸಮಯದಲ್ಲಿ ಪೊಲೀಸರು ದಾಳಿ ಮಾಡಿ 16 ಲಕ್ಷ ನಗದನ್ನು ಜಪ್ತಿ ಮಾಡಿದ್ದಾರೆ. ಯಾವುದೇ ದಾಖಲೆ ಇಲ್ಲದೇ ಹಣ ಸಾಗುತ್ತಿರುವುದರಿಂದ ಚಾಲಕನನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

ನಗದು ಅಕ್ರಮ ವಸ್ತು ಸಾಗಣೆ ಜೋರು: ಇನ್ನು ರಾಜ್ಯದ ವಿಧಾನಸಭೆಯ ಚುನಾವಣೆ ನೀತಿ ಸಂಹಿತೆ ಜಾರಿ ಆಗುವ ಮುಂಚೆಯೇ ಅಕ್ರಮ ವಸ್ತು ಹಾಗೂ ಹಣ ಸಾಗಣೆ ಜೋರಾಗಿ ನಡೆಯುತ್ತಿದೆ. ಬಾಗಲಕೋಟೆ ಜಿಲ್ಲೆಯ ಪೊಲೀಸರು ಈಗಾಗಲೇ ಪ್ರಮುಖ ಸ್ಥಳಗಳಲ್ಲಿ ಚೆಕ್ ಪೋಸ್ಟ್ ಹಾಕಿ, ಪರಿಶೀಲನೆ ನಡೆಸುತ್ತಾ, ಹದ್ದಿನ ಕಣ್ಣು ಇಟ್ಟಿದ್ದಾರೆ.

ದಾಖಲೆ ಇಲ್ಲದೆ 15 ಲಕ್ಷ ನಗದು ಜಪ್ತಿ: ಹುಬ್ಬಳ್ಳಿ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 15 ಲಕ್ಷ ಹಣವನ್ನು ಹುಬ್ಬಳ್ಳಿಯ ಕಾರವಾರ ರಸ್ತೆಯ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಜಪ್ತಿ ಮಾಡಿದ್ದಾರೆ. ಅಂಕೋಲಾದಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ ಕಾರನ್ನು ತಪಾಸಣೆ ನಡೆಸಿದಾಗ 15 ಲಕ್ಷ ಹಣ ಪತ್ತೆಯಾಗಿದೆ. ಕೂಡಲೇ ಚೆಕ್ ಪೋಸ್ಟ್ ಸಿಬ್ಬಂದಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಸ್ಥಳಕ್ಕೆ ತಹಶೀಲ್ದಾರ್​ ಕಲಗೌಡ ಪಾಟೀಲ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಕಾರು ಮತ್ತು ಚಾಲಕನನ್ನು ವಶಕ್ಕೆ ಪಡೆದು ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನು ಓದಿ:ಗಂಗಾವತಿ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 60ಲಕ್ಷ ಹಣ, ಕಾರು ವಶಕ್ಕೆ ಪಡೆದ ಪೊಲೀಸರು..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.