ಬಾಗಲಕೋಟೆ: ತೆರಿಗೆ ವಂಚನೆ, ಅಕ್ರಮ ಹಣ ವರ್ಗಾವಣೆ ಆರೋಪದ ಮೇರೆಗೆ ಬಿಜೆಪಿ ನಾಯಕರಿಗೆ ಆಪ್ತ ಎನ್ನಲಾಗ್ತಿರುವ ಕಾಂಟ್ರಾಕ್ಟರ್ ಡಿ.ವೈ. ಉಪ್ಪಾರ ಅವರ ಮನೆ ಮೇಲೆ ಐಟಿ ದಾಳಿ ನಡೆದಿದೆ.
ಬಾಗಲಕೋಟೆಯ ನವನಗರದ ಸೆಕ್ಟರ್ ನಂಬರ್ 69 ರಲ್ಲಿರುವ ಬಾಡಿಗೆ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಿಂದ ಆಗಮಿಸಿದ 6 ಜನ ಐಟಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.
ಮನೆಯೊಳಗೆ ಇರುವ ಮ್ಯಾನೇಜರ್ ಸಹಿತ ಐದಾರು ಜನರ ವಿಚಾರಣೆ ನಡೆಸಿದ್ದು, ಕೆಲವು ಮಹತ್ತರ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಇಬ್ಬರು ಪೊಲೀಸ್ ಸಿಬ್ಬಂದಿಯೊಡನೆ ಆಗಮಿಸಿದ ಅಧಿಕಾರಿಗಳು ಎಲ್ಲ ಕಡೆಗೆ ಪರಿಶೀಲನೆ ನಡೆಸಿದ್ದಾರೆ.
ಡಿ.ವೈ. ಉಪ್ಪಾರ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಆಪ್ತರಾಗಿದ್ದು, ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು ಎನ್ನಲಾಗ್ತಿದೆ. ಈ ಹಿನ್ನೆಲೆಯಲ್ಲಿ ಅವಳಿ ಜಿಲ್ಲೆಯ ಪ್ರಮುಖ ನೀರಾವರಿ ಯೋಜನೆಯ ಸೇರಿದಂತೆ ಬೃಹತ್ ಕಾಮಗಾರಿಗಳಿಗೆ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗ್ತಿದೆ.
ಇದನ್ನೂ ಓದಿ: ಐಟಿ ದಾಳಿ: ಅಧಿಕಾರಿಗಳು ತಮ್ಮ ಕೆಲಸ ಮಾಡಿದ್ದಾರೆ- ಗೃಹ ಸಚಿವ ಆರಗ ಜ್ಞಾನೇಂದ್ರ