ಬಾಗಲಕೋಟೆ : ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಪಕ್ಷಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸೇರ್ಪಡೆಗೊಳ್ಳುತ್ತಿದ್ದಾರೆ.
ಈ ಹಿನ್ನೆಲೆ ಇದೇ ತಿಂಗಳು 31 ರಂದು ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಭಾಗವಹಿಸಲಿದ್ದಾರೆ ಎಂದು ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ ತಿಳಿಸಿದ್ದಾರೆ.
ನವನಗರದ ಪ್ರೆಸ್ ಕಬ್ಲ್ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜ.31ರಂದು ನವನಗರದ ಕಾಳಿದಾಸ ಮೈದಾನದಲ್ಲಿ ಜೆಡಿಎಸ್ ಪಕ್ಷದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಲಿದ್ದಾರೆ. ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರಿಗೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಓದಿ-ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ಆತ್ಮಹತ್ಯೆ: ಕಾರಣ ನಿಗೂಢ
ಈಗಾಗಲೇ ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಜೆಡಿಎಸ್ ಪಕ್ಷಕ್ಕೆ ಬಿಜೆಪಿ, ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು ಸೇರ್ಪಡೆ ಆಗುತ್ತಿದ್ದಾರೆ. ಅವರನ್ನು ಕುಮಾರಸ್ವಾಮಿ ಅವರು ಸ್ವಾಗತಿಸಲಿದ್ದಾರೆ ಎಂದು ತಿಳಿಸಿದರು.
ಉತ್ತರ ಕರ್ನಾಟಕ ಪ್ರದೇಶದಲ್ಲಿ ಪಕ್ಷದ ಸಂಘಟನೆ ಹಾಗೂ ಬಲವರ್ಧನೆ ಮಾಡಲು ರಾಜ್ಯಾಧ್ಯಕ್ಷರಾದ ಕುಮಾರಸ್ವಾಮಿ ಅವರು ಪ್ರವಾಸ ಹಮ್ಮಿಕೊಂಡಿದ್ದಾರೆ. ಮುಂದಿನ ಜಿ.ಪಂ ಚುನಾವಣೆ ಸೇರಿದಂತೆ ಇತರ ಚುನಾವಣೆ ದೃಷ್ಟಿಯನ್ನು ಇಟ್ಟುಕೊಂಡು ಪಕ್ಷದ ಸಂಘಟನೆಗೆ ಒತ್ತು ನೀಡಲಾಗುತ್ತಿದೆ ಎಂದು ಹನಮಂತ ಮಾನವಿಮರದ ತಿಳಿಸಿದರು.