ಬಾಗಲಕೋಟೆ : ಜಿಲ್ಲೆಯಲ್ಲಿ ಪಕ್ಷದ ಸಂಘಟನೆ ಜೊತೆಗೆ ಪ್ರಮುಖ ಸಮಸ್ಯೆಗಳನ್ನು ತೆಗೆದುಕೊಂಡು ಸರ್ಕಾರದ ವಿರುದ್ಧ ಹೋರಾಟ ಮಾಡುವುದಾಗಿ ಜೆಡಿಎಸ್ನ ನೂತನ ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ ತಿಳಿಸಿದ್ದಾರೆ.
ನವನಗರದ ಪ್ರೆಸ್ ಕ್ಲಬ್ನಲ್ಲಿ ಮಾತನಾಡಿದ ಅವರು, ರಾಜ್ಯದ ನಾಯಕರು ಹಾಗೂ ಜಿಲ್ಲಾ ಕಾರ್ಯಕರ್ತರು ಸೇರಿ ಜಿಲ್ಲಾ ಮಟ್ಟದ ಜವಾಬ್ದಾರಿ ನೀಡಿದ್ದಾರೆ. ಜಿಲ್ಲೆಯಲ್ಲಿ ಪಕ್ಷದ ಸಂಘಟನೆ ಮಾಡುವುದು ಅನಿವಾರ್ಯ ಎಂದರು.
ಕೊರೊನಾ ಹಾಗೂ ನೆರೆ ಹಾವಳಿಯಿಂದ ತತ್ತರಿಸಿರುವ ಜಿಲ್ಲೆಯಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಈ ಕುರಿತು ಸರ್ಕಾರ ಸೂಕ್ತ ಪರಿಹಾರ ಸೇರಿ ಸಮರ್ಪಕ ಕಾರ್ಯಕ್ರಮ ಹಾಕಿಕೊಂಡಿಲ್ಲ. ಹಾಗಾಗಿ ಮುಂದಿನ ದಿನಗಳಲ್ಲಿ ಇದರ ವಿರುದ್ಧ ಹೋರಾಟ ಮಾಡಲಾಗುವುದು ಎಂದರು.