ETV Bharat / state

ಭೂ ಸುಧಾರಣಾ ಕಾಯ್ದೆ ವಿರೋಧಿಸಿ ಬಾಗಲಕೋಟೆಯಲ್ಲಿ ಜೆಡಿಎಸ್​ ಪ್ರತಿಭಟನೆ

author img

By

Published : Sep 15, 2020, 8:28 PM IST

ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ ಮಾಡುತ್ತಿರುವುದನ್ನು ವಿರೋಧಿಸಿ ಬಾದಾಮಿ ಪಟ್ಟಣದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

protest
ಪ್ರತಿಭಟನೆ

ಬಾಗಲಕೋಟೆ: ಬಿಜೆಪಿ ಸರ್ಕಾರ ಒಂದು ವರ್ಷದ ಆಡಳಿತದಲ್ಲಿ, ಕರ್ನಾಟಕ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ ಮಾಡುತ್ತಿರುವುದನ್ನು ವಿರೋಧಿಸಿ ಬಾದಾಮಿ ಪಟ್ಟಣದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಜೆಡಿಎಸ್​ ಪಕ್ಷದ ಜಿಲ್ಲಾ ಅಧ್ಯಕ್ಷರಾದ ಹನಮಂತ ಮಾವಿನಮರದ ನೇತೃತ್ವದಲ್ಲಿ ಬಾದಾಮಿ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಪ್ರತಿಭಟನೆ ಮೆರವಣಿಗೆ ನಡೆಸಿ, ಸರ್ಕಾರದ ವಿರುದ್ಧ ಘೋಷಣೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ತಹಶೀಲ್ದಾರ್​ ಕಚೇರಿಗೆ ತೆರಳಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ ಮಾತನಾಡಿ, ರೈತವಿರೋಧಿ, ಕಾರ್ಮಿಕ ವಿರೋಧಿ ಹಾಗೂ ಜನ ವಿರೋಧಿ ನೀತಿಗಳನ್ನು ಸುಗ್ರೀವಾಜ್ಞೆ ಮುಖಾಂತರ ಜಾರಿಗೆ ತರುತ್ತಿರುವ ಸರ್ಕಾರದ ಕ್ರಮವನ್ನು ಖಂಡಿಸಿದರು. ಸದರಿ ತಿದ್ದುಪಡಿಗಳ ಬಗ್ಗೆ ಪುನರ್ ಪರಿಶೀಲನೆ ಮಾಡಿ, ಈ ತಿದ್ದುಪಡಿಗಳನ್ನು ಹಿಂಪಡಿಯಬೇಕೆಂದು, ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರಿಗೆ ಹಾಗೂ ರಾಜ್ಯಪಾಲರಿಗೆ ತಹಶೀಲ್ದಾರರ ಮುಖಾಂತರ ಮನವಿ ಸಲ್ಲಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.