ETV Bharat / state

ಬಾಗಲಕೋಟೆ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ : ಧ್ವಜಾರೋಹಣ ನೆರವೇರಿಸಿದ ಡಿಸಿಎಂ ಕಾರಜೋಳ

ಬಾಗಲಕೋಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ನಡೆಯಿತು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.

author img

By

Published : Nov 1, 2020, 3:50 PM IST

Kannada Rajyotsava at Bagalkot
ಬಾಗಲಕೋಟೆಯಲ್ಲಿ ಕನ್ನಡ ರಾಜ್ಯೋತ್ಸವ ನಡೆಯಿತು

ಬಾಗಲಕೋಟೆ : ನವ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 65 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಧ್ವಜಾರೋಹಣ ನೇರವೇರಿಸಿದರು. ಬಳಿಕ ಪೊಲೀಸ್​ ಇಲಾಖೆಯಿಂದ ಆಕರ್ಷಕ ಪಥ ಸಂಚಲನ ನೆರವೇರಿತು.

ಈ ವೇಳೆ ಡಿಸಿಎಂ ಕಾರಜೋಳ ಮಾತನಾಡಿ, ಕನ್ನಡ ನಾಡು-‌ ನುಡಿ ಬೆಳೆಸುವಲ್ಲಿ ಹಲವಾರು ಜನರು ಹೋರಾಟ ಮಾಡಿದ್ದಾರೆ. ಜಾನಪದ ಕಲೆಗಳ ಮೂಲಕ ಕರ್ನಾಟಕ ತನ್ನದೆ ಆದ ಮಹತ್ವ ಪಡೆದುಕೊಂಡಿದೆ. ಈ ಹಿನ್ನೆಲೆ ಸರ್ಕಾರ ಪ್ರತಿ ‌ಜಿಲ್ಲೆ , ತಾಲೂಕು ಹಾಗೂ ಗ್ರಾಮ ಮಟ್ಟದಲ್ಲಿ ಸಂಸ್ಕೃತ ಭವನ ನಿರ್ಮಾಣ ಮಾಡುವುದಕ್ಕೆ ಬದ್ದವಾಗಿದೆ ಎಂದರು.

ಬಾಗಲಕೋಟೆಯಲ್ಲಿ ಕನ್ನಡ ರಾಜ್ಯೋತ್ಸವ ನಡೆಯಿತು

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಕಾರ್ಯಕ್ರಮದಲ್ಲಿ ಸನ್ಮಾನ ಮಾಡಲಾಯಿತು. ಬಳಿಕ‌ 2 ಕೋಟಿ ವೆಚ್ಚದಲ್ಲಿ ಕ್ರೀಡಾಂಗಣ ನವೀಕರಣ ಕಾಮಗಾರಿಗೆ ಡಿಸಿಎಂ ಕಾರಜೋಳ ಅಡಿಗಲ್ಲು ಹಾಕಿದರು. ಇದೇ ವೇಳೆ ಈಜುಕೊಳ ಕಾಮಗಾರಿ ಪರಿಶೀಲನೆ ನಡೆಸಿದರು.

ಬಳಿಕ ಮಾಧ್ಯಮವರೊಂದಿಗೆ ಮಾತನಾಡಿದ ಡಿಸಿಎಂ, ಮಳೆ, ಪ್ರವಾಹದಿಂದ ಜಿಲ್ಲೆಯ ವಿವಿಧ ನಗರಗಳಲ್ಲಿ ಸುಮಾರು 500 ಕಿ.ಮೀ ರಸ್ತೆ ಹಾಳಾಗಿದೆ. ಬಾಂದಾರ, ಸೇತುವೆಗಳಿಗೆ ಹಾನಿಯಾಗಿದೆ. ಅವುಗಳನ್ನು ಶೀಘ್ರದಲ್ಲಿ ದುರಸ್ಥಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಉಪಚುನಾವಣೆ ಬಗ್ಗೆ ಪ್ರತಿಕ್ರಿಯಿಸಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೋಲಿನ ಹತಾಶೆಯಿಂದಾಗಿ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಬಿಟ್ಟು ಬಂದಿರುವವರಿಗೆ ಬಿಜೆಪಿ ಪಕ್ಷದಲ್ಲಿ ಎಲ್ಲಾ ಸ್ಥಾನ ಮಾನ ನೀಡಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.