ETV Bharat / state

ಅಂಬೇಡ್ಕರ್​ ಸುತ್ತೋಲೆ ವಿವಾದ: ಸಚಿವ ಸುರೇಶ್​ ಕುಮಾರ್​ ವಿರುದ್ಧ ದಸಂಸ ಪ್ರತಿಭಟನೆ

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಜಿಲ್ಲೆಯ ಜಮಖಂಡಿ ಪಟ್ಟಣದಲ್ಲಿಬಿಜೆಪಿ ಶಿಕ್ಷಣ ಸಚಿವ ಎಸ್.ಸುರೇಶ್​ ಕುಮಾರ್​ ವಿರುದ್ದ ಪ್ರತಿಭಟನೆ ನಡೆಸಿದರು.

protest against Minister Suresh kumar, ಸುರೇಶ್ ಕುಮಾರ್​ ವಿರುದ್ಧ ಪ್ರತಿಭಟನೆ
author img

By

Published : Nov 21, 2019, 10:29 PM IST

ಬಾಗಲಕೋಟೆ: ಡಾ.ಬಿ.ಆರ್.ಅಂಬೇಡ್ಕರ್ ಇತಿಹಾಸವನ್ನು ಅಳಿಸಿ ಹಾಕಲು ಶಿಕ್ಷಣ ಸಚಿವರು ಹೊರಟಿದ್ದಾರೆಂದು ಆರೋಪಿಸಿರುವ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು, ಅವರನ್ನು ಪಕ್ಷದಿಂದ ಹೊರಹಾಕುವಂತೆ ಪ್ರತಿಭಟನೆ ನಡೆಸಿದರು.

ಸಚಿವ ಸುರೇಶ್ ಕುಮಾರ್​ ವಿರುದ್ಧ ಪ್ರತಿಭಟನೆ

ಇಂದು ಜಿಲ್ಲೆಯ ಜಮಖಂಡಿ ಪಟ್ಟಣದ ದೇಸಾಯಿ ವೃತ್ತದ ಬಳಿ ಜಮಾಹಿಸಿದ ಕಾರ್ಯಕರ್ತರು ಸಚಿವರ ವಿರುದ್ಧ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಬಳಿಕ ಸಮಿತಿಯ ರಾಜ್ಯ ಸಂಚಾಲಕರಾದ ರಾಜು ಮೇಲಿನಕೇರಿ, ರವಿ ಬಲೇಶ್ವರ ಮಾತನಾಡಿ, ಅಂಬೇಡ್ಕರ್ ಒಬ್ಬರೆ ಸಂವಿಧಾನ ರಚಿಸಿಲ್ಲ ಎಂಬ ವಿವಾದಾತ್ಮಕ ಹೇಳಿಕೆ ಸಿಎಂಸಿಎ ಸಂಸ್ಥೆಯು ಬರೆದಿರುವುದರಿಂದ ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಈ ಮೂಲಕ ಬಿಜೆಪಿ ಸರ್ಕಾರ ಹಾಗೂ ಶಿಕ್ಷಣ ಸಚಿವ ಸುರೇಶ್​ ಕುಮಾರ್​ಡಾ.ಬಿ.ಆರ್.ಅಂಬೇಡ್ಕರ್ ಇತಿಹಾಸವನ್ನು ಅಳಿಸಲು ಮುಂದಾಗಿದ್ದಾರೆ. ಇಂತಹವರನ್ನು ಸಚಿವ ಸ್ಥಾನದಿಂದ ಕೈ ಬಿಡಬೇಕು ಎಂದು ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಹಾಕುತ್ತ ಸಚಿವರ ಪ್ರತಿಕೃತ ದಹನ ಮಾಡಿ ತಮ್ಮ ವಿವಿಧ ಬೇಡಿಕೆ ಇರುವ ಮನವಿ ಪತ್ರವನ್ನು ತಹಶಿಲ್ದಾರರ ಮೂಲಕ ರಾಜ್ಯಪಾಲರಿಗೆ ಸಲ್ಲಿಸಿದರು.

Intro:AnchorBody:ಬಾಗಲಕೋಟೆ-- ಡಾ.ಬಿ.ಆರ್.ಅಂಬೇಡ್ಕರ್ ಅವರ ಇತಿಹಾಸವನ್ನು ಅಳಿಸಿ ಹಾಕಲು ಹೊರಟಿರುವ ಬಿಜೆಪಿ ಸರ್ಕಾರದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶಕುಮಾರ ಇವರನ್ನು ಸಚಿವ ಸ್ಥಾನದಿಂದ ರಾಜಿನಾಮೆ ಪಡೆದು ಪಕ್ಷದಿಂದ ಹೊರಹಾಕುವಂತೆ ಒತ್ತಾಯಿಸಿ,ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದ ದೇಸಾಯಿ ವೃತ್ತದ ಬಳಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿದರು.
ಸಮಿತಿಯ ರಾಜ್ಯ ಸಂಚಾಲಕರಾದ ರಾಜು ಮೇಲಿನಕೇರಿ,ರವಿ ಬಬಲೇಶ್ವರ ಮಾತನಾಡಿ,
ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚಿಸಿಲ್ಲ ಎಂಬ ವಿವಾದಾತ್ಮಕ ಹೇಳಿಕೆ ಸಿಎಂಸಿಎ ಸಂಸ್ಥೆಯು ಬರೆದಿರುವುದರಿಂದ ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.ಈ ಮೂಲಕ ಬಿಜೆಪಿ ಸರ್ಕಾರ ಪ್ರಾಥಮಿಕ ಹಾಗೂ ಪ್ರೌಢಶಾಲಾ ಸುರೇಶಕುಮಾರ ಅಳಿಸಲು ಮುಂದಾಗಿದ್ದಾರೆ.ಇಂತಹವರನ್ನು ಸಚಿವ ಸ್ಥಾನದಿಂದ ಕೈ ಬಿಡಬೇಕು ಎಂದು ಒತ್ತಾಯಿಸಿದರು. ಇದೇ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಹಾಕುತ್ತಾ,ಸಚಿವರ ಪ್ರತಿಕೃತ ದಹನ ಮಾಡಿದರು.ತಮ್ಮ ವಿವಿಧ ಬೇಡಿಕೆ ಇರುವ ಮನವಿ ಪತ್ರವನ್ನು ತಹಶಿಲ್ದಾರ ಮೂಲಕ ರಾಜ್ಯಪಾಲ ರಿಗೆ ಸಲ್ಲಿಸಿದರು..Conclusion:ಈ ಟಿವಿ,ಭಾರತ,ಬಾಗಲಕೋಟೆ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.