ETV Bharat / state

ರೈತ ಸಂಪರ್ಕ ಕೇಂದ್ರಗಳಲ್ಲಿ ಸರಿಯಾದ ಮಾಹಿತಿ ಒದಗಿಸಿ : ಬಾಯಕ್ಕ ಮೇಟಿ

ರೈತ ಸಂಪರ್ಕ ಕೇಂದ್ರಗಳಿಗೆ ಬರುವ ಬಿತ್ತನೆ ಬೀಜ, ಗೊಬ್ಬರ ಹಾಗೂ ಬೆಳೆಗೆ ಸಿಂಪಡಿಸುವ ಔಷಧಿಗಳ ಬಗ್ಗೆ ಸರಿಯಾದ ಮಾಹಿತಿ ನೀಡುವಂತೆ ಜಿ.ಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಕೃಷಿ ಅಧಿಕಾರಿಗಳಿಗೆ ಸೂಚಿಸಿದರು.

author img

By

Published : Nov 11, 2019, 9:10 PM IST

ರೈತ ಸಂಪರ್ಕ ಕೇಂದ್ರಗಳಲ್ಲಿ ಸರಿಯಾದ ಮಾಹಿತಿ ಒದಗಿಸಿ : ಬಾಯಕ್ಕ ಮೇಟಿ

ಬಾಗಲಕೋಟೆ: ರೈತ ಸಂಪರ್ಕ ಕೇಂದ್ರಗಳಿಗೆ ಬರುವ ಬಿತ್ತನೆ ಬೀಜ, ಗೊಬ್ಬರ ಹಾಗೂ ಬೆಳೆಗೆ ಸಿಂಪಡಿಸುವ ಔಷಧಿಗಳ ಬಗ್ಗೆ ಸರಿಯಾದ ಮಾಹಿತಿ ನೀಡುವಂತೆ ಜಿ.ಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಕೃಷಿ ಅಧಿಕಾರಿಗಳಿಗೆ ಸೂಚಿಸಿದರು.

ಜಿ.ಪಂ ಸಭಾ ಭವನದಲ್ಲಿ ಜರುಗಿದ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರೈತ ಸಂಪರ್ಕ ಕೇಂದ್ರಗಳಲ್ಲಿ ಅಧಿಕಾರಿಗಳು ರೈತರಿಗೆ ಸರಿಯಾದ ಮಾಹಿತಿ ನೀಡುತ್ತಿಲ್ಲ. ಈ ಕುರಿತು ರೈತರಿಂದ ಈ ಕುರಿತು ದೂರುಗಳು ಬಂದಿದ್ದು, ಕೃಷಿ ಇಲಾಖೆಯ ಅಧಿಕಾರಿಗಳು ಸಂಬಂಧ ಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಸೂಚಿಸಿದರು. ಹಾಗೆ ಲಾಭದಾಯಕವಾದ ತೋಟಗಾರಿಕೆ ಬೆಳೆಗಳ ಬಗ್ಗೆ ರೈತರಿಗೆ ಮಾಹಿತಿ ನೀಡಬೇಕು. ಇಲಾಖೆ ನೀಡುವ ಪ್ರತಿಯೊಂದು ಸೌಲಭ್ಯಗಳ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕು. ಅಂದಾಗ ಮಾತ್ರ ತೋಟಗಾರಿಕೆ ಬೆಳೆ ಬೆಳೆಯಲು ರೈತರು ಮುಂದಾಗುತ್ತಾರೆ ಎಂದರು.

ಇನ್ನು ತಾಡಪತ್ರೆಗಳನ್ನು ಸಹ ರೈತರಿಗೆ ಸರಿಯಾಗಿ ಹಂಚಿಕೆಯಾಗುತ್ತಿಲ್ಲ. ಈ ಕುರಿತು ತಾಲೂಕು ಮತ್ತು ಹೋಬಳಿ ಮಟ್ಟದ ಅಧಿಕಾರಿಗಳ ಸಭೆ ನಡೆಸಿ, ತಾಡಪತ್ರೆಗೆಳು ಸರಿಯಾಗಿ ವಿತರಣೆಯಾಗುವಂತೆ ಕ್ರಮ ಕೈಗೊಳ್ಳಲು ತಿಳಿಸಿದರು.

Intro:AnchorBody:ಜಿ.ಪಂ ಮಾಸಿಕ ಕೆಡಿಪಿ ಸಭೆ
ರೈತ ಸಂಪರ್ಕ ಕೇಂದ್ರಗಳಲ್ಲಿ ಸರಿಯಾದ ಮಾಹಿತಿ ಒದಗಿಸಿ : ಬಾಯಕ್ಕ ಮೇಟಿ

ಬಾಗಲಕೋಟೆ-- ರೈತ ಸಂಪರ್ಕ ಕೇಂದ್ರಗಳಿಗೆ ಬರುವ ರೈತರಿಗೆ ಬೀಜ, ಗೊಬ್ಬರ ಹಾಗೂ ಬೆಳೆಗೆ ಸಿಂಪಡಿಸುವ ಔಷಧಿಗಳ ಬಗ್ಗೆ ಸರಿಯಾದ ಮಾಹಿತಿ ನೀಡುವಂತೆ ಜಿ.ಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಕೃಷಿ ಅಧಿಕಾರಿಗಳಿಗೆ ಸೂಚಿಸಿದರು.
          ಜಿ.ಪಂ ಸಭಾಭವನದಲ್ಲಿಂದು ಜರುಗಿದ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರೈತ ಸಂಪರ್ಕ ಕೇಂದ್ರಗಳಲ್ಲಿ ಅಧಿಕಾರಿಗಳು ರೈತರಿಗೆ ಸರಿಯಾದ ಮಾಹಿತಿ ನೀಡುತ್ತಿಲ್ಲ. ರೈತರಿಂದ ಈ ಕುರಿತು ದೂರುಗಳು ಬಂದಿದ್ದು, ಕೃಷಿ ಇಲಾಖೆಯ ಅಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಸೂಚಿಸಿದರು. ತಾಡಪತ್ರೆಗಳನ್ನು ಸಹ ರೈತರಿಗೆ ಸರಿಯಾಗಿ ಹಂಚಿಕೆಯಾಗುತ್ತಿಲ್ಲ. ಈ ಕುರಿತು ತಾಲೂಕಾ ಮತ್ತು ಹೊಬಳಿ ಮಟ್ಟದ ಅಧಿಕಾರಿಗಳ ಸಭೆ ನಡೆಸಿ, ತಾಡಪತ್ರೆಗೆಳು ಸರಿಯಾಗಿ ವಿತರಣೆಯಾಗುವಂತೆ ಕ್ರಮವಹಿಸಲು ತಿಳಿಸಿದರು.
         ಲಾಭದಾಯಕವಾದ ತೋಟಗಾರಿಕೆ ಬೆಳೆಗಳ ಬಗ್ಗೆ ರೈತರಿಗೆ ಮಾಹಿತಿ ನೀಡಬೇಕು. ಅಲ್ಲದೇ ಇಲಾಖೆಯು ನೀಡುವ ಪ್ರತಿಯೊಂದು ಸೌಲಭ್ಯಗಳ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕು. ಅಂದಾಗ ಮಾತ್ರ ತೋಟಗಾರಿಕೆ ಬೆಳೆ ಬೆಳೆಯಲು ರೈತರು ಮುಂದಾಗುತ್ತಾರೆ. ಕವಿತಾ ಮಿಶ್ರಾ ಎಂಬುವವರು ಕೇವಲ 8 ಎಕರೆ ಜಮೀನಿನಲ್ಲಿ ಶ್ರೀಗಂಧದ ಬೆಳೆಯ ಜೊತೆಗೆ ದಾಳಿಂಬೆ, ಪೇರಲ ಸೇರಿದಂತೆ ವಿವಿಧ ತರಹದ ಹಣ್ಣುಗಳನ್ನು ಬೆಳೆದಿದ್ದಾರೆ. ಮಿಶ್ರ ಬೆಳೆ ಬೆಳೆಯುವದರಿಂದ ಆಗುವ ಲಾಭವನ್ನು ಸ್ವತಃ ನೋಡಿ ಕಲಿಯುವಂತೆ ಮಾಡಿದ್ದಾರೆ. ಅಲ್ಲದೇ ಜಾನುವಾರುಗಳನ್ನು ಸಹ ಸಾಕುತ್ತಿರುವುದಾಗಿ ಜಿ.ಪಂ ಸಿಇಓ ಗಂಗೂಬಾಯಿ ಮಾನಕರ ತಿಳಿಸಿದರು.
ರೈತರಿಗೆ ಮಾಹಿತಿ ನೀಡಿ ಆರ್ಥಿಕವಾಗಿ ಸದೃಡರನ್ನಾಗಿ ಮಾಡುವಂತೆ ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು. ರೈತರು ಹನಿ ನೀರಾವರಿ ಅಳವಡಿಸುವಂತೆ ಮಾಡಬೇಕು. ಇಲಾಖೆಯಿಂದ ನೀಡುವ ಸಹಾಯಧನವದ ಮಾಹಿತಿ ನೀಡುವ ಕೆಲಸವಾಗಬೇಕು. ಬರಡು ಭೂಮಿಯಲ್ಲಿಯೂ ಶ್ರೀಗಂಧವನ್ನು ಬೇಳೆಯುವದನ್ನು ಕವಿತಾ ಮಿಶ್ರಾ ತೋರಿಸಿಕೊಟ್ಟಿದ್ದು, ಎಲ್ಲರೂ ರೈತರು ಸಹ ವಿಶ್ರಬೆಳೆ ಬೆಳೆಯುವಂತೆ ಮಾಡಿ ರೈತರು ಆರ್ಥಿಕವಾಗಿ ಸದೃಢರನ್ನಾಗಿ ಮಾಡುವಂತೆ ಸಿಇಓ ತಿಳಿಸಿದರು.
ಅರಣ್ಯ ಇಲಾಖೆಯವರು ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಆವರಣ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ನಿಲಯಗಳ ಆವರಣಗಳಲ್ಲಿ ಗಿಡಗಳನ್ನು ನೆಡುವ ಕಾರ್ಯವಾಗಬೇಕು ಎಂದು ತಿಳಿಸಿದರು. ಉದ್ಯೋಗ ಖಾತರಿ ಯೋಜನೆಯ ಲಾಭವನ್ನು ರೈತರು ಪಡೆದುಕೊಳ್ಳುವಂತೆ ಮಾಡಬೇಕು ಎಂದರು.
ಗ್ರಾಮೀಣ ಭಾಗವದಲ್ಲಿ ಶೌಚಾಲಯವಿದ್ದರೂ ಬಳಸುತ್ತಿಲ್ಲ. ಇದರಿಂದ ಬಯಲು ಬಹೀರ್ದೆಶೆಮುಕ್ತ ಗ್ರಾಮವನ್ನಾಗಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಶೌಚಾಲಯ ಬಳಕೆ ಕುರಿತು ಆಂದೋಲನ ಹಮ್ಮಿಕೊಳ್ಳುವಂತೆ ಜಿ.ಪಂ ಅಧ್ಯಕ್ಷರು ಅಧಿಕಾರಿಗಳು ತಿಳಿಸಿದರು. ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಶೌಚಾಲಯ ಬಳಕೆ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲು ತಿಳಿಸಿದ ಅವರು ಶೌಚಾಲಯ ಬಳಕೆ ಮಾಡುತ್ತಿರುವವರಿಗೆ ಮಾತ್ರ ಪಡಿತರ ವಿತರಿಸಲು ಕ್ರಮಕೈಗೊಳ್ಳಬೇಕು ಎಂದರು.
ಜಿಲ್ಲೆಯ ಪ್ರತಿಯೊಂದು ಶಾಲಾ ಕಾಲೇಜು, ವಿವಿಧ ಇಲಾಖೆಗಳ ವಸತಿ ನಿಲಯಗಳಲ್ಲಿ ಬಯೋ ಗೊಬ್ಬರ ತಯಾರಿಸಲು ಕ್ರಮಕೈಗೊಳ್ಳಬೇಕು. ಮಕ್ಕಳಿಗೆ ಊಟ ಮಾಡಿ ಉಳಿದ ಪದಾರ್ಥಗಳನ್ನು ವೆಸ್ಟ್ ಮಾಡದೇ ಅದನ್ನು ಒಂದು ಗುಡಿಯಲ್ಲಿ ಹಾಕುವ ಮೂಲಕ ಬಯೋ ಗೊಬ್ಬರ ತಯಾರಿಸಲು ಎಲ್ಲರೂ ಮುಂದಾಗಬೇಕು. ಈಗಾಗಲೇ ಗ್ರಾಮ ಪಂಚಾಯತ ಅಭಿವೃಧ್ದಿ ಅಧಿಕಾರಿಗಳು ಕೆಲವೊಂದು ಶಾಲೆಗಳಲ್ಲಿ ಪ್ರಾಯೋಗಿಕವಾಗಿ ಗೊಬ್ಬರ ತಯಾರಿಸಲಾಗಿದ್ದು, ಇದನ್ನು ಎಲ್ಲರೂ ಅನುಸರಿಸಬೇಕು. ಒಂದು ವಾರದಲ್ಲಿ ಈ ಕಾರ್ಯ ಪ್ರಾರಂಭಿಸುವಂತೆ ಹಾಗೂ ಅನಿರೀಕ್ಷಿತವಾಗಿ ಭೇಟಿ ನೀಡುವುದಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಬಾಯಕ್ಕ ಮೇಟಿ ಸೂಚಿಸಿದರು. Conclusion:ಈ ಟಿವಿ,ಭಾರತ,ಬಾಗಲಕೋಟೆ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.