ETV Bharat / state

ಬಾಗಲಕೋಟೆಯಲ್ಲಿ 146 ಜನ ಕೊರೊನಾದಿಂದ ಗುಣಮುಖ... 166 ಹೊಸ ಪ್ರಕರಣಗಳು ದೃಢ

ಬಾಗಲಕೋಟೆ ಜಿಲ್ಲೆಯಲ್ಲಿಂದು 146 ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್​​ ಆಗಿದ್ದಾರೆ. ಹಾಗೂ ಇಂದು ಹೊಸದಾಗಿ 166 ಹೊಸ ಕೋವಿಡ್​ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

kovid  latest report from bagalkot
ಬಾಗಲಕೋಟೆಯಲ್ಲಿ ಪತ್ತೆಯಾದ ಒಟ್ಟು ಪಾಸಿಟಿವ್​ ಪ್ರಕರಣಗಳು
author img

By

Published : Sep 14, 2020, 8:26 PM IST

ಬಾಗಲಕೋಟೆ: ಜಿಲ್ಲೆಯಲ್ಲಿ ಹೊಸದಾಗಿ 166 ಕೊರೊನಾ ಪ್ರಕರಣ ಹಾಗೂ 3 ಸಾವು ಸೋಮವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ 146 ಜನ ಕೋವಿಡ್‍ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಹೊಂದಿದ್ದಾರೆ.ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 8389 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 6948 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ಸೋಂಕು ತಗುಲಿದವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 33, ಬಾದಾಮಿ 14, ಹುನಗುಂದ 44, ಬೀಳಗಿ 12, ಮುಧೋಳ 39, ಜಮಖಂಡಿ 24 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಕೋವಿಡ್​​ ಕೇರ್​​ ಸೆಂಟರ್​​ಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲಾ ಕೋವಿಡ್ ಲ್ಯಾಬ್​ಗೆ ಕಳಿಸಿರುವ 2835 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 82577 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 71041 ನೆಗೆಟಿವ್ ಪ್ರಕರಣಗಳು ಹಾಗೂ ಇಲ್ಲಿವರೆಗೆ ಒಟ್ಟು 217 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ್​​ ಆಗಿರುತ್ತವೆ. ಒಟ್ಟು 8389 ಪಾಸಿಟಿವ್ ಪ್ರಕರಣ ಹಾಗೂ 88 ಜನ ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 1353 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಹಾಗೂ 665 ಕಂಟೈನ್ಮೆಂಟ್ ಝೋನ್ ಇರುವುದಾಗಿ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.