ಬಾಗಲಕೋಟೆ: ಉದ್ಯೋಗ ಖಾತ್ರಿ ಯೋಜನೆಯಲ್ಲಿ ನೀಡುವ ಉದ್ಯೋಗ 200 ದಿನಗಳವರೆಗೆ ಹೆಚ್ಚಿಸಬೇಕು, ಪಡಿತರ ಚೀಟಿಯಲ್ಲಿ ತಲಾ 5 ಕೆ.ಜಿ ಹೆಚ್ಚಿನ ಆಹಾರ ಧಾನ್ಯವನ್ನು 6 ತಿಂಗಳವರೆಗೆ ವಿಸ್ತರಿಸಬೇಕು ಎಂದು ಆಗ್ರಹಿಸಿ ಕೂಲಿ ಕಾರ್ಮಿಕರು ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು.
ಗ್ರಾಮೀಣ ಕೂಲಿ ಕಾರ್ಮಿಕ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಮಿಕರರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕ್ರಾಂತಿ ಗೀತೆಗಳನ್ನು ಮೊಳಗಿಸುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದ್ದು ಗಮನ ಸೆಳೆಯಿತು.