ಬಾಗಲಕೋಟೆ: ಜಿಲ್ಲೆಯ ಇಳಕಲ್ ತಾಲೂಕಿನ ಗುಡೂರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆಯಿಂದಾಗಿ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಓದಿ: ದೀಪಕ್ ರಾವ್ ಕೊಲೆ ಪ್ರಕರಣದ ಆರೋಪಿ ಪಿಂಕಿ ನವಾಜ್ ಮೇಲೆ ಅಟ್ಯಾಕ್..
ನರೇಗಾ ಯೋಜನೆ ಅಡಿ ಕೂಲಿ ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ವಾಹನ ಪಲ್ಟಿಯಾಗಿ ಹಲವರು ಗಾಯಗೊಂಡಿದ್ದರು. ಗಾಯಗೊಂಡವರಿಗೆ ಚಿಕಿತ್ಸೆ ನೀಡುವುದಕ್ಕೆ ಆಸ್ಪತ್ರೆಗೆ ದಾಖಲಿಸಿದಾಗ ಸರಿಯಾದ ಸಿಬ್ಬಂದಿ ಇಲ್ಲವೆಂದು ಚಿಕಿತ್ಸೆ ಸಿಗಲಿಲ್ಲ.
ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು, ಮಹಿಳಾ ಸಿಬ್ಬಂದಿ ಜೊತೆಗೆ ಮಾತಿನ ಚಕಿಮಕಿ ನಡೆಸಿದ್ದಾರೆ. ಇದ್ದ ಓರ್ವ ಮಹಿಳಾ ಸಿಬ್ಬಂದಿ ತನ್ನ ಕೆಲಸದ ಸಮಯ ಮುಗಿದಿದೆ. ನಾನು ಮನೆಗೆ ಹೂರಟ್ಟಿದ್ದೇನೆ, ಚಿಕಿತ್ಸೆ ಕೂಡಲು ಆಗವುದಿಲ್ಲ ಎಂದು ಹೇಳಿದ್ದಾರಂತೆ.
ಜಿಲ್ಲಾ ಮಟ್ಟದ ಆರೋಗ್ಯ ಇಲಾಖೆ ಅಧಿಕಾರಿ ಬರುವವರೆಗೆ ಹೋರಾಟ ನಿಲ್ಲಿಸುವುದಿಲ್ಲ ಎಂದು ತಿಳಿಸಿದಾಗ, ಆರೋಗ್ಯ ಇಲಾಖೆಯ ಅಧಿಕಾರಿ ಡಾ. ಅನಿಲ ದೇಸಾಯಿ ಸ್ಥಳಕ್ಕೆ ಆಗಮಿಸಿ ಸಮಸ್ಯೆ ಆಲಿಸಿದ್ದಾರೆ. ಸಿಬ್ಬಂದಿ ಹಾಗೂ ಆಂಬ್ಯುಲೆನ್ಸ್ ವಾಹನ ಕೊರತೆ ಇರುವ ಬಗ್ಗೆ ಗಮನಕ್ಕೆ ತಂದಾಗ, ಶೀಘ್ರವಾಗಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ. ನಂತರ ಗಾಯಗೊಂಡವರಿಗೆ ಪ್ರಥಮ ಚಿಕಿತ್ಸೆ ನೀಡಿ, ಕೆಲವರಿಗೆ ಹೆಚ್ಚಿನ ಚಿಕಿತ್ಸೆಗೆ ಹುನಗುಂದ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.