ಬಾಗಲಕೋಟೆ: ಮಹರ್ಷಿ ವಾಲ್ಮೀಕಿ ಜಾತ್ರೆ ಹಾಗೂ ಮಠದ 22ನೇ ವಾರ್ಷಿಕೋತ್ಸವವನ್ನು ಫೆಬ್ರುವರಿ 8 ಮತ್ತು 9ರಂದು ಹಮ್ಮಿಕೊಳ್ಳಲಾಗಿದೆ ಎಂದು ವಾಲ್ಮೀಕಿ ನಾಯಕ ಮಹಾಸಭಾದ ಜಿಲ್ಲಾಧ್ಯಕ್ಷ ರಾಜು ನಾಯ್ಕ ಹೇಳಿದರು.
ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಏರ್ಪಡಿಸಲಾಗಿದೆ. ರಥೋತ್ಸವ ಅಂಗವಾಗಿ ಮೀಸಲಾತಿ ಹಾಗೂ ಇತರೆ ಬೇಡಿಕೆಗೆ ಆಗ್ರಹಿಸಿ ಜನಜಾಗೃತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.