ETV Bharat / state

ಬಾಗಲಕೋಟೆ ಜಿಲ್ಲೆಯಲ್ಲಿ ಅತಿವೃಷ್ಟಿ: ಪ್ರವಾಹದಿಂದ 50 ಗ್ರಾಮಗಳು ಜಲಾವೃತ

author img

By

Published : Jul 31, 2021, 7:33 AM IST

ಬಾಗಲಕೋಟೆ ಜಿಲ್ಲೆಯಲ್ಲಿ ಉಂಟಾಗಿರುವ ಅತಿವೃಷ್ಟಿ ಬಗ್ಗೆ ಜಿಲ್ಲಾಡಳಿತ ಸಭೆ ನಡೆಸಿದೆ. ಜಿಲ್ಲೆಯಲ್ಲಿ ಪ್ರವಾಹ ಬಾಧಿತ ಸ್ಥಳದಿಂದ 9760 ಕುಟುಂಬಗಳನ್ನು ಸ್ಥಳಾಂತರಗೊಳಿಸಲಾಗಿದೆ. 34,959 ಜಾನುವಾರುಗಳನ್ನು ಸ್ಥಳಾಂತರ ಮಾಡಲಾಗಿದೆ‌ ಎಂದು ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಸದ ಮಾಹಿತಿ ನೀಡಿದ್ದಾರೆ.

Bagalkote
ಬಾಗಲಕೋಟೆ ಜಿಲ್ಲಾಡಳಿತ ಪ್ರವಾಹ ಕುರಿತು ಸಭೆ

ಬಾಗಲಕೋಟೆ: ಜಿಲ್ಲೆಯಲ್ಲಿ ಕೃಷ್ಣಾ ನದಿ ಪ್ರವಾಹಕ್ಕೆ 30 ಗ್ರಾಮ, ಘಟಪ್ರಭಾ ನದಿಯ 21 ಗ್ರಾಮಗಳು ಪ್ರವಾಹಕ್ಕೆ ನಲುಗಿವೆ. ಜಿಲ್ಲೆಯಲ್ಲಿ ಒಟ್ಟು 50 ಗ್ರಾಮಗಳು ಸಂಪೂರ್ಣ ಪ್ರವಾಹಕ್ಕೆ ಸಿಲುಕಿವೆ ಎಂದು ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಸದ ತಿಳಿಸಿದ್ದಾರೆ.

ಬಾಗಲಕೋಟೆ ಜಿಲ್ಲಾಡಳಿತ ಭವನದಲ್ಲಿ, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದ್ರು. ಜಿಲ್ಲೆಯಲ್ಲಿ 96 ಮನೆಗಳು ಅತಿವೃಷ್ಟಿಯಿಂದ ಹಾನಿಗೊಳಗಾಗಿವೆ. ಜಿಲ್ಲೆಯಲ್ಲಿ ಪ್ರವಾಹ ಬಾಧಿತ ಸ್ಥಳದಿಂದ 9,760 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. 34,959 ಜಾನುವಾರುಗಳನ್ನು ಸ್ಥಳಾಂತರ ಮಾಡಲಾಗಿದೆ‌.

ಜಿಲ್ಲೆಯಲ್ಲಿ 65 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ಇವುಗಳಲ್ಲಿ 15,180 ಜನರು ವಾಸ್ತವ್ಯ ಮಾಡಿದ್ದಾರೆ. ಅವರಿಗೆ ಊಟ, ಉಪಚಾರದ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಲ್ಲಿ ಪ್ರವಾಹದಿಂದ 19,299 ಹೆಕ್ಟೇರ್ ಕೃಷಿ, ಹಾಗೂ 796 ಹೆಕ್ಟೇರ್ ತೋಟಗಾರಿಕೆ ಬೆಳೆ ಜಲಾವೃತವಾಗಿದೆ. ಪ್ರವಾಹ ಪರಿಸ್ಥಿತಿ ಮುಂದುವರೆದಿದೆ, ಜಿಲ್ಲಾಡಳಿತ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಶಿವಯೋಗಿ ಕಳಸದ ತಿಳಿಸಿದರು.

ಇದನ್ನೂ ಓದಿ:ರಾಜ್ಯದಲ್ಲಿ ಮಾನ್ಸೂನ್ ದುರ್ಬಲ: ಕರಾವಳಿ ಜಿಲ್ಲೆಗಳಲ್ಲಿ ಜುಲೈ 31ರಿಂದ ಆಗಸ್ಟ್​ 3ರವರೆಗೆ ವ್ಯಾಪಕ ಮಳೆ ನಿರೀಕ್ಷೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.