ಬಾಗಲಕೋಟೆ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದ್ವಿಶತಕ ದಾಟುತ್ತಿರುವುದರಿಂದ ಆತಂಕಗೊಂಡಿರುವ ವ್ಯಾಪಾರಸ್ಥರು ಸ್ವಯಂ ಪ್ರೇರಣೆಯಿಂದ ಅಂಗಡಿಗಳನ್ನು ಬಂದ್ ಮಾಡಲು ಮುಂದಾಗಿದ್ದಾರೆ.
ಬೆಳಗ್ಗೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಮಾತ್ರ ಅಂಗಡಿಗಳನ್ನು ತೆರೆದು ಮಧ್ಯಾಹ್ನದ ನಂತರ ಬಂದ್ ಮಾಡಿ ಕೊರೊನಾ ಸೋಂಕಿಗೆ ಕಡಿವಾಣ ಹಾಕಲು ಮುಂದಾಗಿದ್ದಾರೆ.
ಹಳೆ ಬಾಗಲಕೋಟೆ, ವಿದ್ಯಾಗಿರಿ, ನವನಗರ ಹಾಗೂ ಗ್ರಾಮೀಣ ಭಾಗದಲ್ಲಿಯೂ ಹೆಚ್ಚು ಸೋಂಕು ಕಾಣಿಸಿಕೊಳ್ಳುತ್ತಿರುವುದರಿಂದ ಬುಧವಾರ ನಗರದಲ್ಲಿ ನಡೆದ ವ್ಯಾಪಾರಸ್ಥರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಸರ್ಕಾರದ ಆದೇಶದಂತೆ ಬೆಳಗ್ಗೆಯಿಂದ ಸಂಜೆ 6 ಗಂಟೆಯವರೆಗೆ ಅಂಗಡಿ ತೆರೆಯಲಾಗುತ್ತಿತ್ತು. ಅದರೆ ಕೊರೊನಾ ಭಯಕ್ಕೆ ಜುಲೈ 10 ರಿಂದ 25 ರವರೆಗೆ ನಗರದ ಬಟ್ಟೆ, ಕಿರಾಣಿ, ಚಿನ್ನ ಹಾಗೂ ನಗರದ ಸಣ್ಣಪುಟ್ಟ ವ್ಯಾಪಾರ ನಡೆಸುವ ಎಲ್ಲಾ ಅಂಗಡಿಗಳು ಮಧ್ಯಾಹ್ನ 2 ಗಂಟೆಗೆ ಅಂದರೆ ನಾಲ್ಕು ಗಂಟೆ ಮುಂಚಿತವಾಗಿಯೇ ಬಂದ್ ಮಾಡಲು ನಿರ್ಧಾರ ಮಾಡಿದ್ದಾರೆ.