ETV Bharat / state

ದಾಖಲೆಗಳಿದ್ದರೆ ಬಿಡುಗಡೆ ಮಾಡುವಂತೆ ಯತ್ನಾಳ್‌ಗೆ ಸಚಿವ ಪ್ರಿಯಾಂಕ್ ಖರ್ಗೆ ಮನವಿ

ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಆರೋಪಿಸಿರುವ 40 ಸಾವಿರ ಕೋಟಿ ರೂ.ಗಳ ಹಗರಣಕ್ಕೆ ಸಂಬಂಧಿಸಿದಂತೆ ಏನೇ ದಾಖಲೆಗಳಿದ್ದರೂ ಬಿಡುಗಡೆ ಮಾಡುವಂತೆ ಸಚಿವ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ.

ಸಚಿವ ಪ್ರಿಯಾಂಕ ಖರ್ಗೆ
ಸಚಿವ ಪ್ರಿಯಾಂಕ ಖರ್ಗೆ
author img

By ETV Bharat Karnataka Team

Published : Dec 27, 2023, 5:16 PM IST

ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ

ಬಾಗಲಕೋಟೆ: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊರೊನಾ ವೇಳೆ 40 ಸಾವಿರ ಕೋಟಿ ರೂ.ಗಳ ಅವ್ಯವಹಾರ ನಡೆದಿದೆ ಎಂದು ಸ್ವಪಕ್ಷದ ವಿರುದ್ಧವೇ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ನಿನ್ನೆ​ ಗಂಭೀರ ಆರೋಪ ಮಾಡಿದ್ದರು. ಇದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್​.ಅಶೋಕ್​ ಮತ್ತು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಕೋಟಾ ಶ್ರೀನಿವಾಸ್ ಪೂಜಾರಿ ಈ ಮೂವರು ಉತ್ತರ ಕೊಡಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯಿಸಿದ್ದಾರೆ.

ಬಾಗಲಕೋಟೆ ನಗರದ ಕಾಂಗ್ರೆಸ್ ಪಕ್ಷದ ಕಚೇರಿಗೆ ಇಂದು ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ಪ್ರತಿಪಕ್ಷದಲ್ಲಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ 40 ಸಾವಿರ ಕೋಟಿ ಹಗರಣದ ಬಗ್ಗೆ ಮಾತನಾಡಿದ್ದಾರೆ. ಇದಕ್ಕೆ ಬಿ.ವೈ.ವಿಜಯೇಂದ್ರ, ಆರ್​. ಅಶೋಕ್, ಕೋಟಾ ಶ್ರೀನಿವಾಸ್ ಪೂಜಾರಿ ಉತ್ತರಿಸಬೇಕು. ಏಕೆಂದರೆ ಇದು ಕಾಂಗ್ರೆಸ್ ಆರೋಪ ಅಲ್ಲ. ಒಬ್ಬ ಹಿರಿಯ, ಮಾಜಿ ಕೇಂದ್ರ ಸಚಿವ, ಹಾಲಿ ಬಿಜೆಪಿ ಶಾಸಕರು ಕೊಟ್ಟ ಹೇಳಿಕೆ. ಯತ್ನಾಳ್​ ಅವರು ಕನ್ನಡಿಗರ ಹಿತಾಸಕ್ತಿ ಕಾಪಾಡಲು ತಮ್ಮ ಬಳಿ ಏನೇ ದಾಖಲೆಗಳಿದ್ದರೂ ಬಿಡುಗಡೆ ಮಾಡಲಿ. ದಾಖಲೆಗಳ ಬಿಡುಗಡೆಗೆ ಮುಜುಗರ ಅನ್ನಿಸಿದರೆ, ನಮ್ಮ ಸರ್ಕಾರದಲ್ಲಿ ಜಸ್ಟೀಸ್ ಮೈಕಲ್ ಸಮಿತಿ ರಚನೆ ಮಾಡಿದ್ದೇವೆ. ಆ ಸಮಿತಿಗಾದರೂ ಕೊಡಲಿ ಎಂದರು.

ಕಾಂಗ್ರೆಸ್​ನವರು ಮಲ್ಲಿಕಾರ್ಜುನ​ ಖರ್ಗೆ ಅವರನ್ನು ಸಿಎಂ ಮಾಡಿಲ್ಲ, ಇನ್ನು ಪಿಎಂ ಮಾಡ್ತಾರಾ ಎಂಬ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ, ಮೊದಲು ಈಶ್ವರಪ್ಪನವರು ತಮ್ಮ ಮಗನಿಗೆ ಟಿಕೆಟ್ ತೆಗೆದುಕೊಳ್ಳುವುದಕ್ಕೆ ಹೇಳಿ, ಆಮೇಲೆ ಮುಂದಿನದು. ಅವರಿಗೆ (ಈಶ್ವರಪ್ಪ) ಅಡ್ರೆಸ್ ಇಲ್ಲ, ಇನ್ನು ಖರ್ಗೆ ಸಾಹೇಬ್ರಿಗೆ ಅಡ್ರೆಸ್ ಕೊಡ್ತಾರಂತಾ? ಎಂದು ತಿರುಗೇಟು ನೀಡಿದರು.

ಮುಂಬರುವ ಲೋಕಸಭಾ ಚುನಾವಣೆ ವಿಷಯವಾಗಿ ಮಾತನಾಡಿದ ಸಚಿವರು, ಎಲ್ಲಾ ಚುನಾವಣೆಯಲ್ಲಿ ಗೆಲ್ಲುವ ದೃಷ್ಠಿಯಿಂದ ಕೆಲವು ನಿರ್ಧಾರಗಳನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ. ಆದರೆ ಯಾರು ಎಂದು ನಿರ್ಧಾರವಾಗಿಲ್ಲ. ಅದಕ್ಕೆ ವೀಕ್ಷಕರಾಗಿ ನಮ್ಮಂಥವರನ್ನು ಹಾಕಿದ್ದಾರೆ. ನಮ್ಮ‌ ವರಿಷ್ಠರ ಜೊತೆ ಚರ್ಚಿಸಿ ತೀರ್ಮಾನವನ್ನು ಹೈಕಮಾಂಡ್‌ಗೆ ತಿಳಿಸುತ್ತೇವೆ. ಅಂತಿಮವಾಗಿ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ಕರ್ನಾಟಕದಿಂದ ಹೆಚ್ಚು ಲೋಕಸಭಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಕಳಿಸಬೇಕು ಎಂಬ ದೃಷ್ಠಿಯಿಂದ ಕೆಲಸ ಮಾಡುತ್ತೇವೆ ಎಂದು ಹೇಳಿದರು..

ಬಾಗಲಕೋಟೆ ಲೋಕಸಭೆಗೆ ಈ ಬಾರಿ ಅಹಿಂದ ವರ್ಗಕ್ಕೆ ಟಿಕೆಟ್ ಕೊಡುವ ಆಗ್ರಹವಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಪ್ರಿಯಾಂಕ್ ಖರ್ಗೆ, ಯಾರೇ ಇದ್ದರೂ ಸ್ಥಳೀಯ ಮುಖಂಡರ ಅಭಿಪ್ರಾಯ ಸಂಗ್ರಹಣೆ ಮಾಡುತ್ತೇವೆ. ಎಲ್ಲಿ ಹೆಚ್ಚಿನ ಅಭಿಪ್ರಾಯ ಇರುತ್ತದೋ ಅದನ್ನು ತಿಳಿಸುತ್ತೇವೆ.
ಇದೇ ಸಮಾಜ, ಅದೇ ಸಮಾಜಕ್ಕೆ ಕೊಡಬೇಕು ಎಂದು ನಿರ್ದಿಷ್ಟವಾದ ನಿರ್ದೇಶನ ಇಲ್ಲಿನ ಕಾರ್ಯಕರ್ತರಿಂದ, ನಾಯಕರಿಂದ ಬಂದಿಲ್ಲ. ಗೆಲ್ಲೋದು ಮುಖ್ಯ. ಸಾಮಾಜಿಕ ನ್ಯಾಯ ಮುಂದಿಟ್ಟುಕೊಂಡೇ ಕಾಂಗ್ರೆಸ್‌ ಯಾವಾಗಾಲೂ ಆಯ್ಕೆ ಮಾಡಿದೆ. ಅದರಂತೆ ಈ ಬಾರಿಯೂ ಆಯ್ಕೆ ಮಾಡುತ್ತೇವೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಬಿ.ತಿಮ್ಮಾಪೂರ, ಶಾಸಕರಾದ ಜೆ.ಟಿ.ಪಾಟೀಲ್, ಎಚ್.ವೈ.ಮೇಟಿ, ಜಿಲ್ಲಾ ಕಾಂಗ್ರೆಸ್ ಪಕ್ಷದ ಘಟಕದ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ ಸೇರಿದಂತೆ ಇತರ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಇದನ್ನೂ ಓದಿ: ಯತ್ನಾಳ್ ಸತ್ಯ ಹೇಳಿದ್ದಾರೆ, ಸರ್ಕಾರ ಕ್ರಮ ಕೈಗೊಳ್ಳುವುದು ಒಳ್ಳೆಯದು: ಸಚಿವ ಮಧು ಬಂಗಾರಪ್ಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.