ಬಾಗಲಕೋಟೆ: ಹೃದಯ ಸಂಬಂಧಿ ಕಾಯಿಲೆ ನಡುವೆಯೂ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ನೂರಕ್ಕೆ ನೂರರಷ್ಟು ಅಂಕಗಳಿಸಿದ ವಿದ್ಯಾರ್ಥಿನಿ ಗಂಗಮ್ಮ ಮನೆಗೆ ಶಾಸಕ ವೀರಣ್ಣ ಚರಂತಿಮಠ ಅವರು ಭೇಟಿ ನೀಡಿ ಶುಭಾಶಯ ತಿಳಿಸಿದ್ದಾರೆ.
ಮುಚಖಂಡಿ ತಾಂಡಾದ ದುರ್ಗಾದೇವಿ ಹೈಸ್ಕೂಲ್ನಲ್ಲಿ ಅಧ್ಯಯನ ಮಾಡಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿನಿ ಗಂಗಮ್ಮ ರಾಜ್ಯದ ಜನರ ಗಮನ ಸೆಳೆದಿದ್ದಳು. ಹೀಗಾಗಿ, ಶಾಸಕರು ಭೇಟಿ ನೀಡಿ ಹೂ ಗುಚ್ಛ ಕೊಟ್ಟು ಅಭಿನಂದಿಸಿದರು.
ಈ ಬಗ್ಗೆ ಶಾಸಕ ವೀರಣ್ಣ ಚರಂತಿಮಠ ಮಾತನಾಡಿದರು. ಬವಿವಿ ಸಂಘದಲ್ಲಿ ಗಂಗಮ್ಮಳಿಗೆ ಮುಂದಿನ ವಿದ್ಯಾಭ್ಯಾಸವನ್ನ ಉಚಿತವಾಗಿ ನೀಡಲಾಗುವುದು. ವಿದ್ಯಾರ್ಥಿನಿಗೆ ಆರೋಗ್ಯ ಸಮಸ್ಯೆಯಿದೆ. ಅದರ ಬಗ್ಗೆಯೂ ಗಮನ ಹರಿಸುತ್ತೇನೆ. ನಮ್ಮ ಕುಮಾರೇಶ್ವರ ಆಸ್ಪತ್ರೆಯಲ್ಲಿ ಎಲ್ಲವೂ ಉಚಿತವಾಗಿ ಚಿಕಿತ್ಸೆ ಕೊಡಿಸಲಾಗುವುದು. ಹಾಗೆಯೇ ಅವಳ ಉನ್ನತ ಮಟ್ಟದ ಸಾಧನೆಗೆ ಪ್ರೋತ್ಸಾಹ ನೀಡಲಾಗುವುದು ಎಂದರು.
ಓದಿ: ಹುಬ್ಬಳ್ಳಿ-ಧಾರವಾಡ ಮಧ್ಯೆ ಖಾಸಗಿ ಬಸ್ ಸಂಚಾರಕ್ಕೆ ಸರ್ಕಾರದ ಒತ್ತು: ಸಾರ್ವಜನಿಕರಿಂದ ಆಕ್ರೋಶ