ಬಾಗಲಕೋಟೆ: ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯಡಿ ಪೋಷಣ್ ಮಾಸಾಚರಣೆ ಕಾರ್ಯಕ್ರಮಕ್ಕೆ ಶಾಸಕರಾದ ವೀರಣ್ಣ ಚರಂತಿಮಠ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದ್ರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 117 ಭಾಗ್ಯಲಕ್ಷ್ಮೀ ಬಾಂಡ್ ವಿತರಣೆ ಮತ್ತು 327 ಅಂಗನವಾಡಿ ಕಾರ್ಯಕರ್ತರಿಗೆ (ಕೋವಿಡ್ 19 ವಾರಿಯರ್ಸ್) ಪ್ರಶಂಸನಾ ಪ್ರಮಾಣಪತ್ರವನ್ನು ಶಾಸಕ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೊರೊನಾ ಹಿನ್ನೆಲೆ, ಎಲ್ಲರೂ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸುವುದು ಅಗತ್ಯವಿದೆ. ಈಗಾಗಲೇ ಕೊರೊನಾ ರೋಗ ಹತೋಟಿಗೆ ತರಲು ಶ್ರಮಿಸಿದ ವಾರಿಯರ್ಸ್ಗೆ ಸನ್ಮಾನ ಮಾಡಲಾಗಿದೆ. ಸರ್ಕಾರದ ಯೋಜನೆಯನ್ನು ಅಧಿಕಾರಿಗಳು ಸದುಪಯೋಗ ಆಗುವಂತೆ ಶ್ರಮಿಸಬೇಕಾಗಿದೆ ಎಂದರು.