ಬಾಗಲಕೋಟೆ: ನವನಗರದ ಯೂನಿಟ್-2 ನಿವಾಸಿಗಳಿಗಾಗಿ ಹೊಸದಾಗಿ ನಿರ್ಮಾಣಗೊಳ್ಳುತ್ತಿರುವ ಎರಡು ಉಪ ವಿದ್ಯುತ್ ವಿತರಣಾ ಕೇಂದ್ರಗಳಿಗೆ ಶಾಸಕ ವೀರಣ್ಣ ಚರಂತಿಮಠ ಭೇಟಿ ನೀಡಿ, ಕಾಮಗಾರಿ ಪರಿಶೀಲಿಸಿದರು.
ಈ ವೇಳೆ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿರುವುದನ್ನು ಕಂಡು ಸಂಬಂಧಪಟ್ಟ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಉಪ ವಿದ್ಯುತ್ ಸರಬರಾಜು ಕೇಂದ್ರವು 30 ಎಂವಿಎ ಸಾಮರ್ಥ್ಯ ಹೊಂದಿದ್ದು, ಇದು ಹೈಟೆಕ್ ಮಾದರಿಯಲ್ಲಿ ನಿರ್ಮಾಣವಾಗಿತ್ತು. ನಿಗದಿತ ಸಮಯಕ್ಕೆ ಕಾಮಗಾರಿ ಪೂರ್ಣಗೊಳ್ಳುತ್ತಿಲ್ಲ. ಇದರಿಂದ ಸಂತ್ರಸ್ತರು ಯೂನಿಟ್-2 ರಲ್ಲಿ ಮನೆ ನಿರ್ಮಿಸಿಕೊಳ್ಳಲು ಹಾಗೂ ವಾಣಿಜ್ಯ ಕಟ್ಟಡ ನಿರ್ಮಾಣ ಮಾಡಲು ಅಡೆತಡೆ ಉಂಟಾಗುತ್ತಿದೆ. ಇನ್ಮುಂದೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಬಾರದು. ಮೂರು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಿ, ಲೋಕಾರ್ಪಣೆ ಮಾಡಬೇಕು ಎಂದು ಸೂಚಿಸಿದರು.