ಬಾಗಲಕೋಟೆ: ಏಪ್ರಿಲ್ 18 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬಾಗಲಕೋಟೆ ನಗರಕ್ಕೆ ಆಗಮಿಸಲಿದ್ದಾರೆ. ಈ ಹಿನ್ನಲೆ ನಗರದ ರೋಟರಿ ವೃತ್ತದ ಬಳಿಯಿರುವ ಬೃಹತ್ ಸ್ಥಳದಲ್ಲಿ ಸ್ವಚ್ಚತಾ ಕಾರ್ಯಕ್ರಮಕ್ಕೆ ಶಾಸಕ ವೀರಣ್ಣ ಚರಂತಿಮಠ ಚಾಲನೆ ನೀಡಿದರು.
ಸುಮಾರು 16 ಏಕರೆ ಇರುವ ಬಸಪ್ಪ ದೊಡ್ಡಮನಿ ಇವರ ಜಮೀನಿನಲ್ಲಿ ಮೋದಿ ಆಗಮನಕ್ಕೆ ಬೃಹತ್ ವೇದಿಕೆ ಸಜ್ಜಾಗಲಿದೆ. ವಿಜಯಪುರ-ಬಾಗಲಕೋಟೆ ಲೋಕಸಭಾ ಕ್ಷೇತ್ರದ ಪ್ರಚಾರದ ಅಂಗವಾಗಿ ಆಗಮಿಸುತ್ತಿರುವ ಹಿನ್ನಲೆ ಸುಮಾರು 2 ಲಕ್ಷಕ್ಕೂ ಅಧಿಕ ಜನರು ಸೇರುವ ನೀರಿಕ್ಷೆಯಿದೆ. ಮೂರು ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಈ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಕೆ.ಎಸ್ ಈಶ್ವರಪ್ಪ ಸೇರಿದಂತೆ ಇತರ ಮುಖಂಡರು ಭಾಗವಹಿಸಲಿದ್ದಾರೆ. ಎಪ್ರಿಲ್ 18 ರಂದು ಮಧ್ಯಾಹ 2 ಗಂಟೆಗೆ ಆಗಮಿಸಲಿರುವ ಪ್ರಧಾನಿ ಮಂತ್ರಿ, ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಿ, ಜನತೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಶಾಸಕ ವೀರಣ್ಣ ಚರಂತಿಮಠ ತಿಳಿಸಿದರು.