ETV Bharat / state

ಶಿಥಿಲಾವಸ್ಥೆಯಲ್ಲಿ ಶಾಲಾ ಕಟ್ಟಡ: ಭಯದ ನೆರಳಲ್ಲಿ ವಿದ್ಯಾರ್ಥಿಗಳಿಗೆ ಪಾಠ - Dysfunction

ಶಿಥಿಲಾವಸ್ಥೆಗೆ ತಲುಪಿದ ಶಾಲಾ ಕಟ್ಟಡದವೊಂದರಲ್ಲಿಯೇ ವಿದ್ಯಾರ್ಥಿಗಳಿಗೆ ಪಾಠ ಮಾಡಬೇಕಾದ ಪರಿಸ್ಥಿತಿ ಬಂದೊದಗಿದೆ. ಸಂಬಂಧಪಟ್ಟ ಅಧಿಕಾರಿಗಳು ನೋಡಿಯೂ ನೋಡದಂತೆ ನಿರ್ಲಕ್ಷ್ಯ ವಹಿಸಿದ್ದಾರೆ. ಆದರೆ, ಈ ಕೂಡಲೇ ಅಧಿಕಾರಿಗಳು ಇತ್ತ ಗಮನ ಹರಿಸಿ ಸಮಸ್ಯೆಗೆ ಪರಿಹಾರ ಹೇಳಬೇಕು ಎನ್ನುತ್ತಾರೆ ಸ್ಥಳೀಯರು.

ಶಿಥಿಲಾವಸ್ಥೆಯಲ್ಲಿ ಶಾಲಾ ಕಟ್ಟಡ
author img

By

Published : May 1, 2019, 8:11 AM IST

ಬಾಗಲಕೋಟೆ: ಬನಹಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡವು ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದ್ದರಿಂದ ಪ್ರಾಥಮಿಕ ಶಾಲೆಯನ್ನು ಇಲ್ಲಿಂದ ಸ್ಥಳಾಂತರ ಮಾಡಲಾಗಿತ್ತು. ಆದರೆ, ಇದೇ ಕೊಠಡಿಗಳಲ್ಲಿ ಬಿಎ ವಿದ್ಯಾರ್ಥಿಗಳಿಗೆ ಇದೀಗ ಪಾಠ ಮುಂದುವರೆಸಿದ್ದಾರೆ. ಹಾಗಾಗಿ ವಿದ್ಯಾರ್ಥಿಗಳು ಭಯದ ನೆರಳಲ್ಲಿ ಪಾಠ ಕೇಳುವಂತಾಗಿದೆ.

learning lesson in a dilapidated school room
ಶಿಥಿಲಾವಸ್ಥೆಗೆ ತಲುಪಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ

ಕಟ್ಟಡ ಮುಂಭಾಗ ಸಂಪೂರ್ಣ ಬೀಳುವ ಹಂತಕ್ಕೆ ಬಂದಿದೆ. ಆದರೂ ಕೊಠಡಿಗಳನ್ನು ಸ್ವಲ್ಪ ದುರಸ್ತಿಗೊಳಿಸಿ ಮತ್ತೆ ಇಲ್ಲಿಯೇ ಪಾಠ ಮಾಡಲಾಗುತ್ತಿದೆ. ಒಂದು ಕೊಠಡಿಯಲ್ಲಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಬಿಸಿ ಊಟ ತಯಾರಿಸಲು ಬಳಸಲಾಗುತ್ತಿದೆ. ಇದೂ ಸಹ ಸಂಪೂರ್ಣ ಶಿಥಿಲಾವಸ್ಥೆಯಲ್ಲಿದೆ. ಕಟ್ಟಡ ಯಾವಾಗಲಾದರೂ ಬೀಳುವ ಸಾಧ್ಯತೆ ಇದೆ. ಈ ಬಗ್ಗೆ ಎಲ್ಲರಿಗೂ ಎಲ್ಲವೂ ಗೊತ್ತಿದೆ. ಆದರೂ ಬೇರೆ ವ್ಯವಸ್ಥೆ ಇಲ್ಲದ್ದರಿಂದ 250 ಕ್ಕೂ ಅಧಿಕ ವಿದ್ಯಾರ್ಥಿಗಳು ಭಯದ ನೆರಳಲ್ಲಿಯೇ ಪಾಠ ಕೇಳುವಂತಾಗಿದೆ ಎನ್ನುತ್ತಿದ್ದಾರೆ ಇಲ್ಲಿನ ವಿದ್ಯಾರ್ಥಿಗಳು.

ಕಟ್ಟದ ಶಿಥಿಲಾವಸ್ಥೆಗೆ ತಲುಪಿರುವುದು ನಿಜ. ಹಾಗಾಗಿಯೇ ಪದವಿ ಕಾಲೇಜಿನ ಹೊಸ ಕಟ್ಟಡ ಮದನಮಟ್ಟಿ ಹನುಮಾನ ದೇವಸ್ಥಾನ ಪಕ್ಕದಲ್ಲಿ ನಿರ್ಮಿಸಲಾಗಿದೆ. ಆದರೆ, ಅದು ಇನ್ನೂ ಉದ್ಘಾಟನೆಗೊಳ್ಳದ ಕಾರಣ ಇದೇ ಕೊಠಡಿಗಳಲ್ಲಿ ಪಾಠ ಮಾಡುವುದು ಅನಿವಾರ್ಯವಾಗಿದೆ ಎನ್ನುತ್ತಾರೆ ಇಲ್ಲಿನ ಸಿಬ್ಬಂದಿ.

ಕಟ್ಟಡ ಕುಸಿದು ಏನಾದರೂ ಪ್ರಾಣ ಹಾನಿ ಆದರೆ ಇದಕ್ಕೆ ಯಾರು ಹೊಣೆ? ಹಾಗಾಗಿ ಮುಂದಾಗುವ ಅನಾಹುತವನ್ನು ತಪ್ಪಿಸಬೇಕು. ಈ ಕಟ್ಟಡವನ್ನು ಸಂಪೂರ್ಣ ತೆರವುಗೊಳಿಸಿ ಹೊಸ ಕಟ್ಟಡ ನಿರ್ಮಿಸಬೇಕು. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎನ್ನುತ್ತಾರೆ ಸ್ಥಳೀಯರು.

sample description
ETV Bharat Logo

Copyright © 2025 Ushodaya Enterprises Pvt. Ltd., All Rights Reserved.