ಬಾಗಲಕೋಟೆ: ಕೌಟುಂಬಿಕ ಕಲಹದ ಕಾರಣ ಒಂದು ವರ್ಷದ ಮಗುವಿನೊಂದಿಗೆ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುಳೇದಗುಡ್ಡ ತಾಲೂಕಿನ ರಾಘಾಪೂರ ಗ್ರಾಮದಲ್ಲಿ ನಡೆದಿದೆ.
ಫಕೀರಮ್ಮ (22), ಮಗಳು ಶಿವಾಣಿ (1) ಮೃತ ದುರ್ದೈವಿಗಳು. ಹೊರಗೆ ಹೋಗಿ ಬರುವುದಾಗಿ ಹೇಳಿದ್ದ ಮಹಿಳೆ ಗ್ರಾಮದ ಬಳಿ ಇರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಜಿಲ್ಲಾ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ, ಬಾವಿಯಲ್ಲಿದ್ದ ಮೃತದೇಹಗಳನ್ನು ಮೇಲೆಕ್ಕೆತ್ತಿದರು.
ತಾಯಿ-ಮಗು ಸಾವಿನ ಕಾರಣ ಸಂಬಂಧಿಗಳ ಆಕ್ರಂದನ ಮುಗಿಲು ಮುಟ್ಟಿತ್ತು. ಸ್ಥಳಕ್ಕೆ ಗುಳೇದಗುಡ್ಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗುಳೇದಗುಡ್ಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.