ETV Bharat / state

ಏಪ್ರಿಲ್​​ನಿಂದ ಹೊಸ ಮರಳು ನೀತಿ ಜಾರಿಗೆ : ಸಚಿವ ಮುರುಗೇಶ್ ನಿರಾಣಿ - ಸ್ಕೂಲ್ ಆಫ್​ ಮೈನಿಂಗ್

ಗಣಿಗಾರಿಕೆಯಲ್ಲಿ ಸ್ಫೋಟದಿಂದಾಗುವ ಅನಾಹುತ ತಪ್ಪಿಸುವ ನಿಟ್ಟಿನಲ್ಲಿ ಕಾರ್ಮಿಕರಿಗೆ ಸೂಕ್ತ ತರಬೇತಿ ನೀಡುವ ಸ್ಕೂಲ್ ಆಫ್​ ಮೈನಿಂಗ್ ಕೇಂದ್ರವನ್ನು ಬಳ್ಳಾರಿ ಜಿಲ್ಲೆಯ ಸಂಡೂರು ಮತ್ತು ಚಿತ್ರದುರ್ಗದಲ್ಲಿ ನಿರ್ಮಿಸಲಾಗುತ್ತಿದೆ. ಸಂಡೂರಿನಲ್ಲಿ ಈಗಾಗಲೇ 50 ಎಕರೆ ಭೂಮಿ ಖರೀದಿಸಲಾಗಿದೆ. ಏಪ್ರಿಲ್ ತಿಂಗಳಲ್ಲಿ ಭೂಮಿ ಪೂಜೆ ನೆರವೇರಿಸಲಾಗುತ್ತಿದೆ..

Minister Murugesh nirani
ಸಚಿವ ಮರುಗೇಶ್ ನಿರಾಣಿ
author img

By

Published : Apr 5, 2021, 8:35 PM IST

Updated : Apr 5, 2021, 9:12 PM IST

ಬಾಗಲಕೋಟೆ : ಜನ ಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ಮರಳು ಪೂರೈಸುವ ನಿಟ್ಟಿನಲ್ಲಿ ಇದೇ ಏಪ್ರಿಲ್ ತಿಂಗಳಿನಿಂದ ಹೊಸ ಮರಳು ನೀತಿ ಜಾರಿಗೆ ತರಲಾಗುತ್ತಿದೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಮಾತನಾಡಿದ ಅವರು, ಈ ಹೊಸ ನೀತಿಯನ್ವಯ 10 ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಮನೆಗಳಿಗೆ ಪ್ರತಿ ಟನ್‍ಗೆ 100 ರೂ.ಗಳಿಗೆ ಆಯಾ ಭಾಗದ ಗ್ರಾಮ ಪಂಚಾಯತ್, ನಗರಸಭೆ ಅನುಮತಿ ತೋರಿಸಿದಂತೆ ನಿಗದಿತ ಮರಳು ಪೂರೈಸಲಾಗುವುದು. ಸರ್ಕಾರದಿಂದ ಟೆಂಡರ್ ಕರೆಯಲಾಗಿದೆ. ಕಾಮಗಾರಿಗಳಿಗೆ ಮರಳು ಸಂಗ್ರಹ ಹೊರತುಪಡಿಸಿ ಗುತ್ತಿಗೆದಾರ ಕಾರ್ಯನಿರ್ವಹಿಸಿದಂತೆ ಹಂತ ಹಂತವಾಗಿ ಪೂರೈಸಲಾಗುವುದು ಎಂದರು.

ಸಾರ್ವಜನಿಕರು ಉಪಯೋಗಿಸಲ್ಪಡುವ ಕುಡಿಯುವ ನೀರಿಗೆ ಸಂಬಂಧಿಸಿದ ಸ್ಥಳಗಳಾದ ಹಳ್ಳ, ಕೆರೆ ಹಾಗೂ ಆಣೆಕಟ್ಟಿನ ಹಿನ್ನೀರಿನ ಪ್ರದೇಶದಲ್ಲಿ ಮರಳು ತೆಗೆಯದಂತೆ ನಿರ್ಬಂಧ ಹೇರಲಾಗುತ್ತಿದೆ. ಮರಳು ದರವನ್ನು ಪ್ರತಿದಿನ ಬಂಗಾರ, ಬೆಳ್ಳಿ ದರ ಪ್ರಕಟಗೊಂಡಂತೆ ಪ್ರತಿ ವಾರಕ್ಕೊಮ್ಮೆ ದರದ ಪಟ್ಟಿ ನೀಡಲಾಗುವುದು. ಇದರಿಂದ ಸರ್ಕಾರಕ್ಕೆ ಆದಾಯ ಹೆಚ್ಚುವುದರ ಜೊತೆಗೆ ಸಾರ್ವಜನಿಕರಿಗೆ ಮುಕ್ತ ಮರಳು ದೊರೆಯಲಿದೆ ಎಂದರು.

ಕೆಲವು ಜಿಲ್ಲೆಗಳಲ್ಲಿ ಆಯಾ ಜಿಲ್ಲಾ ಪಂಚಾಯತ್‌ಗಳೇ ಮರಳುಗಾರಿಕೆ ನಿಯಂತ್ರಣಿಸಿತ್ತಿದೆ. ಇದರಲ್ಲೂ ಕೂಡ ಅಕ್ರಮವಾಗದಂತೆ ಸರ್ಕಾರ ಮಧ್ಯ ಪ್ರವೇಶಿಸಲಿದೆ. ಮೈನಿಂಗ್ ಮಾಡಲು ಸರ್ಕಾರಕ್ಕೆ 2,500 ಅರ್ಜಿಗಳು ಬಂದಿದ್ದವು. ಎಲ್ಲವನ್ನು ಸರಳೀಕೃತಗೊಳಿಸಲಾಗುವುದು.

ಪ್ರತಿ ಜಿಲ್ಲೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಹಾಗೂ ರಾಜ್ಯ ಮಟ್ಟದಲ್ಲಿ ಗಣಿ ಮತ್ತು ಭೂವಿಜ್ಞಾನ ಸಚಿವರ ಅಧ್ಯಕ್ಷತೆಯಲ್ಲಿ ಗಣಿ ಅದಾಲತ್ ನಡೆಸಲಾಗುತ್ತಿದೆ. ಅದಕ್ಕಾಗಿ ಏಪ್ರೀಲ್ 30ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಗಣಿ ಅದಾಲತ್​​ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಗಣಿಗಾರಿಕೆಯಲ್ಲಿ ಸ್ಫೋಟದಿಂದಾಗುವ ಅನಾಹುತ ತಪ್ಪಿಸುವ ನಿಟ್ಟಿನಲ್ಲಿ ಕಾರ್ಮಿಕರಿಗೆ ಸೂಕ್ತ ತರಬೇತಿ ನೀಡುವ ಸ್ಕೂಲ್ ಆಫ್​ ಮೈನಿಂಗ್ ಕೇಂದ್ರವನ್ನು ಬಳ್ಳಾರಿ ಜಿಲ್ಲೆಯ ಸಂಡೂರು ಮತ್ತು ಚಿತ್ರದುರ್ಗದಲ್ಲಿ ನಿರ್ಮಿಸಲಾಗುತ್ತಿದೆ. ಸಂಡೂರಿನಲ್ಲಿ ಈಗಾಗಲೇ 50 ಎಕರೆ ಭೂಮಿ ಖರೀದಿಸಲಾಗಿದೆ. ಏಪ್ರಿಲ್ ತಿಂಗಳಲ್ಲಿ ಭೂಮಿ ಪೂಜೆ ನೆರವೇರಿಸಲಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಕಬ್ಬಿಣ ಮೈನಿಂಗ್​ಗೆ ಅವಕಾಶ ನೀಡಿ : ಎಫ್‍ಐಎಂಐ ಆಗ್ರಹ

Last Updated : Apr 5, 2021, 9:12 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.