ETV Bharat / state

ಬಾಗಲಕೋಟೆ: ಬಾಲ್ಯ ವಿವಾಹ ತಡೆದ ಅಧಿಕಾರಿಗಳು

ರಾಮದುರ್ಗ ತಾಲೂಕಿನ ಕಂದ್ರಾಳ ಗ್ರಾಮದಲ್ಲಿ ನಡೆಯಬೇಕಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದಿದ್ದಾರೆ.

bagalkot
ಬಾಲ್ಯ ವಿವಾಹ ತಡೆದ ಅಧಿಕಾರಿಗಳು
author img

By

Published : Jun 16, 2021, 8:31 AM IST

ಬಾಗಲಕೋಟೆ: ಕೊರೊನಾ ಲಾಕ್​​ಡೌನ್ ವೇಳೆಯಲ್ಲಿ ಬಾಲ್ಯ ವಿವಾಹಗಳು ನಡೆದಿರುವ ಬಗ್ಗೆ ಚರ್ಚೆ ನಡೆಯುತ್ತಲೇ ಇದೆ. ಈ ಮಧ್ಯೆ ಜಾಗೃತರಾಗಿರುವ ಮುಧೋಳ ತಾಲೂಕು ಆಡಳಿತ ಜೂ.18 ರಂದು ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಂದ್ರಾಳ ಗ್ರಾಮದಲ್ಲಿ ನಡೆಯಬೇಕಿದ್ದ ಬಾಲ್ಯ ವಿವಾಹವನ್ನು ತಡೆದಿದ್ದಾರೆ.

ಮುಧೋಳ ತಾಲೂಕಿನ ನಾಗರಾಳ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ರಕ್ಷಣೆ ಮಾಡುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ಅಪ್ರಾಪ್ತ ಬಾಲಕಿ ಮನೆಗೆ ಸಿಡಿಪಿಓ ನೇತೃತ್ವದ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಿ ನಾಗರಾಳ ಗ್ರಾಮದ 9ನೇ ತರಗತಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯನ್ನ ರಕ್ಷಣೆ ಮಾಡಿದರು.

ಮಕ್ಕಳ ಸಹಾಯವಾಣಿಗೆ ಬಂದ ಕರೆ ಆಧರಿಸಿ ಅಪ್ರಾಪ್ತ ಬಾಲಕಿಯನ್ನು ರಕ್ಷಣೆ ಮಾಡಲಾಗಿದೆ. ಬಾಲಕಿಯ ಪೋಷಕರಿಂದ ಮುಚ್ಚಳಿಕೆ ಪತ್ರ ಪಡೆದು ಅಪ್ರಾಪ್ತೆಯನ್ನ ಬಾಲ ಮಂದಿರಕ್ಕೆ ಕರೆತರಲಾಗಿದೆ. ಸದ್ಯ ಬಾಗಲಕೋಟೆ ಬಾಲ ಮಂದಿರಕ್ಕೆ ಅಪ್ರಾಪ್ತ ಬಾಲಕಿಯನ್ನು ಹಸ್ತಾಂತರ ಮಾಡಿ ಜಾಗೃತಿ ಮೂಡಿಸಲಾಗಿದೆ.

ಮುಧೋಳ ತಹಶೀಲ್ದಾರ, ಸಿಡಿಪಿಓ, ಇಓ ಮತ್ತು ಪೊಲೀಸರ ನೇತೃತ್ವದಲ್ಲಿ ಅಧಿಕಾರಿಗಳು ಬಾಲ್ಯ ವಿವಾಹ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.