ಬಾಗಲಕೋಟೆ: ಜಿಲ್ಲೆಯ ಸಮುದಾಯ ಆರೋಗ್ಯ ಕೇಂದ್ರದ ಡಿ ದರ್ಜೆ ನೌಕರನೊಬ್ಬ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
59 ವರ್ಷದ ಪಿ.11211 ಮೃತ ವ್ಯಕ್ತಿ. ಗುಳೇದಗುಡ್ಡ ಸಮುದಾಯ ಆರೋಗ್ಯ ಕೇಂದ್ರದ ಡಿ ದರ್ಜೆ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದ ಇವರು ಕಳೆದ ನಾಲ್ಕು ದಿನಗಳ ಹಿಂದೆ ತೀವ್ರ ಉಸಿರಾಟದ ತೊಂದರೆಯಿಂದ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಜೂನ್ 27 ರಂದು ಸೋಂಕು ತಗುಲಿರುವುದು ದೃಢಪಟ್ಟಿತ್ತು.
ಕಳೆದೊಂದು ದಿನದಿಂದ ವೆಂಟಿಲೇಟರ್ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಕೋವಿಡ್ ನಿಯಮಾವಳಿ ಪ್ರಕಾರ ಅಂತ್ಯಸಂಸ್ಕಾರ ನಡೆಸಲಾಗುವುದು ಎಂದು ಡಿಹೆಚ್ಒ ಅನಂತ ದೇಸಾಯಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ ಐದಕ್ಕೇರಿದೆ.