ETV Bharat / state

ಬಾಗಲಕೋಟೆಯಲ್ಲಿ ಪಂಚಮಸಾಲಿ ರಾಜ್ಯ ಕಾರ್ಯಕಾರಿಣಿ ಸಭೆ: ಮೀಸಲಾತಿಗಾಗಿ 3 ನಿರ್ಣಯ

author img

By

Published : Dec 10, 2021, 9:57 AM IST

ಪಂಚಮಸಾಲಿ ಸಮುದಾಯದ ರಾಜ್ಯ ಕಾರ್ಯಕಾರಿಣಿ ಸಭೆ ಬಾಗಲಕೋಟೆಯಲ್ಲಿ ಗುರುವಾರ ನಡೆಯಿತು. ಈ ಸಭೆಯಲ್ಲಿ ಮೂರು ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು.

Panchamasali State Executive Meeting
ಬಸವ ಜಯ ಮೃತ್ಯುಂಜಯ ಸ್ವಾಮೀಜಿ

ಬಾಗಲಕೋಟೆ: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ನಡೆಯುತ್ತಿದ್ದ ಹೋರಾಟ ಹಿನ್ನೆಲೆಯಲ್ಲಿ ಬಾಗಲಕೋಟೆ ಖಾಸಗಿ ಹೋಟೆಲ್​​ನಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಿತು.

ಪಂಚಮಸಾಲಿ ‌ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮುಖ್ಯವಾಗಿ ಮೂರು ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ.

ನಿರ್ಣಯಗಳು ಹೀಗಿವೆ:

  • ಡಿ.15ರಂದು ಬೆಳಗಾವಿಯಲ್ಲಿ ಪಂಚಮಸಾಲಿ ಸಮಾಜದ ಹಾಲಿ-ಮಾಜಿ ಶಾಸಕರ ಸಭೆ. ಈ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಮಿಸಿ, ಮೀಸಲಾತಿ ಕುರಿತು ಸ್ಪಷ್ಟ ಮಾಹಿತಿ ನೀಡಬೇಕು.
  • ಪಂಚಮಸಾಲಿ ಮೀಸಲಾತಿ ಚಳುವಳಿ ಪ್ರಾರಂಭವಾಗಿ ಒಂದು ವರ್ಷ ಪೂರ್ಣಗೊಂಡಿದೆ. ಹೀಗಾಗಿ ಚಳುವಳಿ ವರ್ಷಾಚರಣೆಯ ಅಂಗವಾಗಿ ಜ.14ರಂದು ಕೂಡಲ ಸಂಗಮದಲ್ಲಿ ವರ್ಷಾಚರಣೆಯ ಆಚರಣೆ ಸಭೆ ಮಾಡಿ, ಮೀಸಲಾತಿಗಾಗಿ ಏನು ಮಾಡಬೇಕು ಎಂದು ಅಂತಿಮ ತೀರ್ಮಾನ ತೆಗೆದುಕೊಳ್ಳುವುದು.
  • ಹಿಂದುಳಿದ ವರ್ಗಗಳ ಆಯೋಗ ಇರುವುದರಿಂದ, ಸುಭಾಷ್ ಅಡಿ ನೇತೃತ್ವದ ಸಮಿತಿಯನ್ನು ರದ್ದುಪಡಿಸಿ, ಈಗ ಇರುವ ಆಯೋಗದ ವರದಿಯನ್ನು ಮುಂದುವರೆಸಬೇಕು.

ಈ ಮೂರು ನಿರ್ಣಯಗಳನ್ನು ಎಲ್ಲರೂ ಸರ್ವಾನುಮತದಿಂದ ಅಂಗೀಕಾರ ಮಾಡಿದ್ದಾರೆ. ವಿಜಯಪುರ ಶಾಸಕಬಸನಗೌಡ ಪಾಟೀಲ್ ಯತ್ನಾಳ್​​, ಧಾರವಾಡ ಶಾಸಕ ಅರವಿಂದ ಬೆಲ್ಲದ ಹಾಗೂ ಹುನಗುಂದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಸಮ್ಮುಖದಲ್ಲಿ ವಿವಿಧ ಪ್ರದೇಶಗಳಿಂದ ಆಗಮಿಸಿದ ಸಮಾಜದ ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ: ಹಾವೇರಿ ಆಸ್ಪ್ರತ್ರೆಯ ವಿದ್ಯುತ್ ಸಮಸ್ಯೆ ನಿವಾರಣೆಗೆ ಕ್ರಮ: ಈಟಿವಿ ಭಾರತ ವರದಿ ಫಲಶ್ರುತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.