ಬಾಗಲಕೋಟೆ: ಪೊಲೀಸರಿಂದ ಗರ್ಭಿಣಿ ಹಾಗೂ ಮೈದುನನ ಮೇಲೆ ಹಲ್ಲೆ ಮಾಡಿದ ಆರೋಪ ಹಿನ್ನೆಲೆ ನಗರದ ಬಸವೇಶ್ವರ ವೃತ್ತದ ಬಳಿ ಕೆಲ ಸಮಯ ಗೊಂದಲಮಯ ವಾತಾವರಣ ನಿರ್ಮಾಣವಾಯಿತು.
ಬಾಗಲಕೋಟೆ ನಗರ ಸಿಪಿಐ ಐ.ಆರ್. ಪಟ್ಟಣಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಲು ಯತ್ನಿಸಿದರು. ಹೊಡೆದ ಪೊಲೀಸರ ವಿರುದ್ಧ ಕಂಪ್ಲೇಂಟ್ ಕೊಡುವಂತೆ ಸಿಪಿಐ ಮನವೊಲಿಸಿದರು. ಘಟನೆಯಿಂದ ಬಸವೇಶ್ವರ ವೃತ್ತದಲ್ಲಿ ಕೆಲ ಸಮಯ ಸಂಚಾರಕ್ಕೆ ತೊಂದರೆ ಉಂಟಾಯಿತು.
ನಂತರ ಸ್ಥಳಕ್ಕಾಗಮಿಸಿದ ಬಂಜಾರಾ ಸಮಾಜದ ಮುಖಂಡರು, ಗರ್ಭಿಣಿಯನ್ನು ಆಸ್ಪತ್ರೆಗೆ ಕಳುಹಿಸಿಕೊಟ್ಟರು. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಪ್ರತಿಕ್ರಿಯೆ ನೀಡಿದ್ದು, ಆರೋಪಿತರಾದ ಇಬ್ಬರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಘಟನೆ ಬಗ್ಗೆ ತನಿಖೆ ನಡೆಸಿ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ. ಘಟನೆಯ ಸಂಪೂರ್ಣ ವಿವರ ಇನ್ನಷ್ಟೇ ತಿಳಿಯಬೇಕಿದೆ.