ಬಾಗಲಕೋಟೆ: ಕೋವಿಡ್ ವಾರಿಯರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯಕ್ಕೆ ತೆರಳುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಬಿದ್ದು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ನಡೆದಿದೆ.
ಸಂಗಪ್ಪ ಕರಿಯಪ್ಪ ಕರಿಗಾರ (33) ಮೃತ ದುರ್ದೈವಿ. ಮುಧೋಳದಲ್ಲಿ ಜು.28 ರಂದು ಅಪಘಾತ ನಡೆದಿತ್ತು. ಬಳಿಕ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾನ್ಸ್ಟೇಬಲ್ಗೆ ಗೌರವ ವಂದನೆ ಸಲ್ಲಿಸಿ, ಪೊಲೀಸ್ ಇಲಾಖೆ ವತಿಯಿಂದ ಅಂತಿಮ ನಮನ ಸಲ್ಲಿಸಲಾಗಿದೆ.
ಮೃತ ಕಾನ್ಸ್ಟೇಬಲ್ ಮುಧೋಳ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಪತ್ನಿ, 3 ವರ್ಷದ ಗಂಡು ಮಗು ಹಾಗೂ ಒಂದೂವರೆ ವರ್ಷದ ಹೆಣ್ಣು ಮಗುವನ್ನು ಅಗಲಿದ್ದಾರೆ.