ETV Bharat / state

ವಸತಿ ನಿಲಯ, ಅಂಗನವಾಡಿಗಳಿಗೆ ಆಹಾರ ಆಯೋಗ ಅಧ್ಯಕ್ಷರ ಭೇಟಿ, ಪರಿಶೀಲನೆ

author img

By

Published : Jan 18, 2021, 7:23 PM IST

ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿದ ರಾಜ್ಯ ಆಹಾರ ಆಯೋಗದ ಅಧ್ಯಕ್ಷರು ಮಕ್ಕಳಿಗೆ, ಗರ್ಭಿಣಿಯರಿಗೆ ಆಹಾರ ಪದಾರ್ಥಗಳನ್ನು ಅವರವರ ಮನೆಗಳಿಗೆ ತಲುಪಿಸುತ್ತಿರುವ ಬಗ್ಗೆ ಮಾಹಿತಿ ಪಡೆದರು.

President of State Food Commission
ಬಾಗಲಕೋಟೆ

ಬಾಗಲಕೋಟೆ: ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಎಚ್.ವಿ. ಶಿವಶಂಕರ್ ನವನಗರದ ಮೆಟ್ರಿಕ್ ನಂತರದ ವಿವಿಧ ವಸತಿ ನಿಲಯ, ಅಂಗನವಾಡಿ ಕೇಂದ್ರ ಹಾಗೂ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪರಿಶೀಲನೆ ನಡೆಸುತ್ತಿರುವ ರಾಜ್ಯ ಆಹಾರ ಆಯೋಗದ ಅಧ್ಯಕ್ಷರು

ಸೋಮವಾರ ನವನಗರದ ವಾಂಬೆ ಕಾಲೋನಿಯಲ್ಲಿರುವ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಮಕ್ಕಳಿಗೆ, ಗರ್ಭಿಣಿಯರಿಗೆ ಆಹಾರ ಪದಾರ್ಥಗಳನ್ನು ಅವರವರ ಮನೆಗಳಿಗೆ ತಲುಪಿಸುತ್ತಿರುವ ಬಗ್ಗೆ ಮಾಹಿತಿ ಪಡೆದರು. ನಂತರ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಪರಿಶಿಷ್ಟ ವರ್ಗದ ಬಾಲಕಿಯರ ವಸತಿ ನಿಲಯ, ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಗಳಿಗೆ ಭೇಟಿ ನೀಡಿ ಆಹಾರ ದಾಸ್ತು ಕೋಣೆ, ಅಡುಗೆ ಮನೆ, ವಿದ್ಯಾರ್ಥಿಗಳ ಕೋಣೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ವಸತಿ ನಿಲಯದ ವಿದ್ಯಾರ್ಥಿಗಳನ್ನು ಮಾತನಾಡಿಸಿದ ಅವರು, ಊಟ, ಸೌಲಭ್ಯಗಳನ್ನು ಸರಿಯಾಗಿ ನೀಡುತ್ತಿರುವ ಬಗ್ಗೆ ವಿಚಾರಿಸಿದಾಗ ಯಾವುದೇ ರೀತಿಯ ತೊಂದರೆ ಇಲ್ಲ, ಸರಿಯಾದ ರೀತಿಯಲ್ಲಿ ನೋಡಿಕೊಳ್ಳುತ್ತಿರುವ ಬಗ್ಗೆ ವಿದ್ಯಾರ್ಥಿಗಳು ತಿಳಿಸಿದರು. ನಂತರ ನ್ಯಾಯಬೆಲೆ ಅಂಗಡಿಗೆ ತೆರಳಿದ ಅಧ್ಯಕ್ಷರು ಅಲ್ಲಿರುವ ಆಹಾರ ಧಾನ್ಯಗಳನ್ನು ಪರಿಶೀಲಿಸಿದರು.

ವಿವಿಧೆಡೆ ಭೇಟಿ ಸಮಯದಲ್ಲಿ ವಸತಿ ನಿಲಯ ಮಕ್ಕಳ ಹಾಜರಾತಿ, ಆಹಾರ ಸ್ಟಾಕ್ ರಿಜಿಸ್ಟರ್​ ಸೇರಿದಂತೆ ವಿವಿಧ ಕಡತಗಳನ್ನು ಪರಿಶೀಲನೆ ನಡೆಸಿ ವಿದ್ಯಾರ್ಥಿಗಳಿಗೆ ಉತ್ತಮ ಆಹಾರ ಪೂರೈಸಬೇಕು. ಅವರಿಗೆ ಸಿಗಬೇಕಾದ ಎಲ್ಲ ರೀತಿಯ ಸೌಲಭ್ಯ, ಸ್ವಚ್ಛತೆಗೆ ಹೆಚ್ಚಿನ ಗಮನಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ವಿವಿಧ ರೈತರ ಸಾಮಗ್ರಿಗಳನ್ನು ವಿತರಿಸಿದರು. ನಂತರ ತಾಲೂಕಾ ಎಂಎಸ್ಪಿಟಿಸಿ ಕೇಂದ್ರಕ್ಕೆ ಭೇಟಿ ನೀಡಿ ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಆಗುತ್ತಿರುವ ಆಹಾರ ಪದಾರ್ಥಗಳನ್ನು ಪರಿಶೀಲನೆ ನಡೆಸಿದರು.

ಇದನ್ನೂ ಓದಿ: ಗಡಿ ಕ್ಯಾತೆ: ಮಹಾರಾಷ್ಟ್ರಕ್ಕೆ ಒಂದಿಂಚೂ ನೆಲ ಬಿಡುವ ಮಾತೇ ಇಲ್ಲ ಎಂದ ಕಾರಜೋಳ

ಭೇಟಿ ಸಂದರ್ಭದಲ್ಲಿ ರಾಜ್ಯ ಆಹಾರ ಆಯೋಗದ ಸದಸ್ಯೆ ಮಂಜುಳಾ ಸಾತನೂರ, ಆಹಾರ ಇಲಾಖೆಯ ಉಪನಿರ್ದೇಶಕ ಶ್ರೀಶೈಲ ಕಂಕಣವಾಡಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮಂಜುನಾಥ ಡೊಂಬರ, ಕೃಷಿ ಇಲಾಖೆಯ ಉಪನಿರ್ದೇಶಕ ಕೊಂಗವಾಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಪ್ರಭಾರಿ ಉಪನಿರ್ದೇಶಕ ಎ.ಕೆ. ಬಸಣ್ಣವರ, ತಾಲೂಕಾ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ತಹೀರಾಬಾನು ನದಾಫ್, ಶಿಶು ಅಭಿವೃದ್ದಿ ಯೋಜನಾಧಿಕಾರಿ ಶಿಲ್ಪಾ ಹಿರೇಮಠ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.