ಬಾಗಲಕೋಟೆ: ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡುವ ಎಲ್ಲಾ ಸೌಕರ್ಯಗಳಿದ್ದರೂ ಸಹ ಪುನಶ್ಚೇತನಗೊಳಿಸದಿರುವುದು ರೋಗಿಗಳಿಗೆ ದೊಡ್ಡ ಸಮಸ್ಯೆಯಾಗಿದೆ.
ಸಮುದಾಯ ಕೇಂದ್ರದಲ್ಲಿ ಆಕ್ಸಿಜನ್, ವೆಂಟಿಲೇಟರ್ ಬೆಡ್ ಸೌಕರ್ಯ ಮಾಡಲಾಗಿದೆ. ನಿರ್ವಹಣೆ ಮಾಡುವ ಸಿಬ್ಬಂದಿ ಇಲ್ಲದೆ ಎಲ್ಲಾ ಸಾಮಗ್ರಿಗಳು ತುಕ್ಕು ಹಿಡಿದಿವೆ. ಈ ಆರೋಗ್ಯ ಕೇಂದ್ರದಲ್ಲಿ ಪ್ರತ್ಯೇಕ ಆಕ್ಸಿಜನ್ ಒದಗಿಸುವ ಪೈಪ್ಲೈನ್ ಸಹ ಅಳವಡಿಸಲಾಗಿದೆ. ವಿದ್ಯುತ್ ಘಟಕ ಸೇರಿ ಸುಮಾರು 50 ಬೆಡ್ಗಳು ಇವೆ. ಆದರೆ ಅದರ ಸದುಪಯೋಗ ಪಡಿಸಿಕೊಳ್ಳುವಲ್ಲಿ ಸರ್ಕಾರ ಹಾಗೂ ಜಿಲ್ಲಾಡಳಿತ ವಿಫಲವಾಗಿವೆ.
ಕೊರೊನಾ ರೋಗಿಗಳನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗುತ್ತಿದೆ. ಆದರೆ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗಿ ಸೂಕ್ತ ಚಿಕಿತ್ಸೆ ಸಿಗದೆ ಮೃತ ಪಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿರುವ ಸರ್ಕಾರಿ ಆಸ್ಪತ್ರೆಗಳಿಗೆ ಆಕ್ಸಿಜನ್ ಘಟಕ, ವೆಂಟಿಲೇಟರ್ ವ್ಯವಸ್ಥೆ ಗುಣಮಟ್ಟದಲ್ಲಿ ನಿರ್ವಹಣೆ ಮಾಡಿದ್ದರೆ ಈಗಿನ ಸ್ಥಿತಿ ಬರುತ್ತಿರಲ್ಲಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಓದಿ:ಕೋವಿಡ್ ಸೋಂಕಿತರು ನೇರವಾಗಿ ಸಿಸಿಸಿ ಕೇಂದ್ರಕ್ಕೆ ದಾಖಲಾಗಿ -ಸಹಾಯವಾಣಿ ಅಗತ್ಯವಿಲ್ಲ: ಬಿಬಿಎಂಪಿ