ಬಾಗಲಕೋಟೆ: ತಾಲೂಕು ಪಂಚಾಯಿತಿ ಪ್ರಗತಿ ಪರಿಶೀಲನಾ ಸಭೆಗೆ ಬರುವಂತೆ ಮಾಹಿತಿ ನೀಡಿದ್ದರೂ ಸಭೆಗೆ ಗೈರಾದ ಅಧಿಕಾರಿಗಳಿಗೆ ನೋಟಿಸ್ ನೀಡಿ ಎಂದು ಶಾಸಕ ವೀರಣ್ಣ ಚರಂತಿಮಠ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಬಸರಿಗಿಡದ ಅವರಿಗೆ ಸೂಚಿಸಿದ್ದಾರೆ.
ನಗರದ ಬಿವ್ಹಿಬ್ಹಿ ಸಂಘದ ಮಿನಿ ಸಭಾಭವನದಲ್ಲಿ ಸೋಮವಾರ ತಾಲೂಕು ಪಂಚಾಯಿತಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಮಯಕ್ಕೆ ಸರಿಯಾಗಿ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಬೇಕು. ತಿಳಿದಾಗ ಸಭೆಗೆ ಬರಬೇಡಿ ಎಂದರು.
ಓದಿ:ರೈತರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ; ಯಡಿಯೂರಪ್ಪ
ಯಾವುದೇ ಅನುದಾನ ಲ್ಯಾಪ್ಸ್ ಆಗದಂತೆ ನೋಡಿಕೊಳ್ಳಬೇಕು. ಮಾರ್ಚ್ ಅಂತ್ಯಕ್ಕೆ ಅನುದಾನ ಎಲ್ಲವೂ ಬಳಕೆ ಆಗುವ ರೀತಿಯಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಸೂಚಿಸಿದರು.