ಬಾಗಲಕೋಟೆ : ಫೇಸ್ಬುಕ್ನಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕ್ಷತ್ರೀಯ ಒಕ್ಕೂಟ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.
ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಕ್ಷತ್ರೀಯ ಒಕ್ಕೂಟದ ಉಪಾಧ್ಯಕ್ಷ ನಾರಾಯಣಸಾ ಭಾಂಡೆಗೆ ನೇತೃತ್ವದಲ್ಲಿ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿ, ಅವಹೇಳನಕಾರಿ ಹೇಳಿಕೆ ನೀಡುವವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಭಾಂಡೆಗೆ, ಫೇಸ್ಬುಕ್ನಲ್ಲಿ ಶಿವಾಜಿ ಮಹಾರಾಜ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ, ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು. ಈ ರೀತಿ ಮಾಡಿರುವವರು ಯಾರೇ ಆಗಲಿ ಅವರ ವಿರುದ್ಧ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಲಾಯಿತು.