ETV Bharat / state

ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಒತ್ತಾಯಿಸಿ ಪ್ರತಿಭಟನೆ - undefined

ರಾಜ್ಯ ಸರ್ಕಾರದಿಂದ ದಿವ್ಯ ನಿರ್ಲಕ್ಷ್ಯದಿಂದಾಗಿ ಪರಿಶಿಷ್ಟ ವರ್ಗದ ಸಮುದಾಯಕ್ಕೆ ಸಿಗಬೇಕಾದ ಸವಲತ್ತುಗಳು ಕಾಲಕಾಲಕ್ಕೆ ಸಿಗುತ್ತಿಲ್ಲ. ಈ ಮೂಲಕ ಸಮುದಾಯವನ್ನು ಕಡೆಗಣಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ
author img

By

Published : Jun 7, 2019, 3:18 PM IST

ಬಾಗಲಕೋಟೆ: ಪರಿಶಿಷ್ಟ ವರ್ಗದ ಸಮುದಾಯಕ್ಕೆ ಮೀಸಲು ಪ್ರಮಾಣ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿ ನಗರದಲ್ಲಿ ಜಿಲ್ಲಾ ವಾಲ್ಮೀಕಿ ನಾಯಕ‌ ಮಹಾಸಭಾದ ಸದಸ್ಯರು ಶುಕ್ರವಾರ ಪ್ರತಿಭಟನೆ ನಡೆಸಿದರು.

ನವನಗರದ ಎಸ್.ಪಿ ಕಚೇರಿಯಿಂದ ಜಿಲ್ಲಾಡಳಿತ ಭವನದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯುದ್ದಕ್ಕೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ಶೇ 7.5ರಷ್ಟು ಮೀಸಲು ಪ್ರಮಾಣ ನೀಡುವಂತೆ ಆದೇಶಿಸಿದೆ. ಆದರೆ, ರಾಜ್ಯ ಸರ್ಕಾರ ಕೇವಲ ಶೇ 3ರಷ್ಟು ಮಾತ್ರ ನೀಡುತ್ತಿದೆ ಎಂದು ಆರೋಪಿಸಿದರು.

ಪ್ರತಿಭಟನೆ

ಜಿಲ್ಲಾಡಳಿತ ಭವನದ ಎದುರು ನಡೆದ ಬಹಿರಂಗ ಸಭೆಯಲ್ಲಿ ಮುಖಂಡ ಶಂಭುಗೌಡ ಪಾಟೀಲ್ ಮಾತನಾಡಿ, ಬೇರೆ ರಾಜ್ಯಗಳಲ್ಲಿ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಮೀಸಲು ನೀತಿ ಜಾರಿಗೊಳಿಸಲಾಗಿದೆ. ಕರ್ನಾಟಕ ಸರ್ಕಾರ ಮಾತ್ರ ಮೀಸಲು ಪ್ರಮಾಣ ಹೆಚ್ಚಿಸಲು ಮೀನಮೇಷ ಎಣಿಸುತ್ತಿದೆ ಎಂದು ಕಿಡಿಕಾರಿದರು.

ರಾಜ್ಯದಲ್ಲಿ ಜನಗಣತಿ ಪ್ರಕಾರ ಪರಿಶಿಷ್ಟ ವರ್ಗದವರ ಸಂಖ್ಯೆ ಶೇ 6 ರಷ್ಟಿದೆ. ಈ ಜನಸಂಖ್ಯೆ ಪ್ರಮಾಣವು 8 ವರ್ಷಗಳ ಹಿಂದೆ ನಡೆಸಿದ ಜನಗಣತಿ ಆಧಾರಿತವಾಗಿದೆ. ಆದರೀಗ ಶೇ 7.5ಕ್ಕೂ ಅಧಿಕ ಜನಸಂಖ್ಯೆ ಇರಬಹುದು. ಆದ್ದರಿಂದ ‌ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಲೇಬೇಕು. ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ಈ ಬೇಡಿಕೆಯನ್ನು ಸರ್ಕಾರ ಕೂಡಲೇ ಈಡೇರಿಸಬೇಕು ಎಂದು ಪತ್ರವನ್ನು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

Intro:Anchor

Body:ಪರಿಶಿಷ್ಟ ವರ್ಗದವರಿಗೆ ಕರ್ನಾಟಕ ರಾಜ್ಯದಲ್ಲಿ ನಿಗದಿಪಡಿಸಿರುವ ಮೀಸಲಾತಿ ಪ್ರಮಾಣವನ್ನು ಶೇಕಡಾ 3% ರಿಂದ ಶೇಕಡಾ 7.5% ಗೆ ಹೆಚ್ಚಿಸಬೇಕು ಎಂದು ಆಗ್ರಹಿಸಿ,ಬಾಗಲಕೋಟೆ ನಗರದಲ್ಲಿ ಜಿಲ್ಲಾ ವಾಲ್ಮೀಕಿ ನಾಯಕ‌ ಮಹಾಸಭಾ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನವನಗರದ ಎಸ್ ಪಿ ಆಫೀಸ್ ದಿಂದ ಪ್ರಾರಂಭವಾದ ಪ್ರತಿಭಟನೆ ಮೆರವಣಿಯು ಜಿಲ್ಲಾಡಳಿತ ಭವನದವರೆಗೆ ನಡೆಸಲಾಯಿತು. ಈ ಸಂದರ್ಭದಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ನಂತರ ಜಿಲ್ಲಾಡಳಿತ ಭವನದ ಎದುರು ಮುಖಂಡರಾದ ಶಂಭುಗೌಡ ಪಾಟೀಲ್ ಮಾತನಾಡಿ,ರಾಜ್ಯದಲ್ಲಿ ಜನಗಣತಿ ಯ ಅಂಕಿ ಅಂಶಗಳ ಪ್ರಕಾರ ಪರಿಶಿಷ್ಟ ವರ್ಗದವರ ಜನಸಂಖ್ಯೆ 42,48,987 ಇದ್ದು,ರಾಜ್ಯದ ಒಟ್ಟಾರೆ ಜನಸಂಖ್ಯೆಯಲ್ಲಿ ಶೇಕಡಾ 6.95 ರಷ್ಟು ಇದೆ.ಈ ಜನಸಂಖ್ಯೆ ಪ್ರಮಾಣವು ಈಗಾಗಲೇ ಜನಗಣತಿ ಪಡೆದು 8 ವರ್ಷಗಳ ಕಳೆದಿರುವುದರಿಂದ ಶೇಕಡಾ 7.5.% ಕ್ಕೂ ಹೆಚ್ಚಿರುತ್ತದೆ.ಆದ್ದರಿಂದ ‌ಮೀಸಲಾತಿ ಪ್ರಮಾಣ ಹೆಚ್ಚಿಸಬೇಕು,ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುವವರ ಮೇಲೆ ಕಠಿಣ ಕ್ರಮ ಜರುಗಿಸಬೇಕು ಎಂದು ಸೇರಿದಂತೆ ವಿವಿಧ ಬೇಡಿಕೆಗಾಗಿ ಆಗ್ರಹಿಸಿ,ಪ್ರತಿಭಟನೆ ನಡೆಸಿದರು. ಇದೇ ಸಂದರ್ಭದಲ್ಲಿ ತಮ್ಮ ಬೇಡಿಕೆ ಇರುವ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಗಳಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ರಾದ ರಾಜು ನಾಯ್ಕರ್,ಸುರೇಂದ್ರ ನಾಯಕ,ಸೇರಿದಂತೆ ಇತರ ಮುಖಂಡರು ಉಪಸ್ಥಿತರಿದ್ದರು.

Conclusion:ಈ ಟಿ ವಿ,ಭಾರತ್,ಬಾಗಲಕೋಟೆ..

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.