ಬಾಗಲಕೋಟೆ: ಹೆಚ್ಚಿನ ಸಂಖ್ಯೆಯಲ್ಲಿ ಬಸ್ಗಳ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ಟಯರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಜಂಬಗಿ ಬಿ.ಕೆ.ಗ್ರಾಮದಲ್ಲಿ ನಡೆದಿದೆ.
ಈ ಮೊದಲು ಐದಾರು ಬಸ್ಗಳು ಸಂಚಾರ ಮಾಡುತ್ತಿದ್ದವು. ಇದೀಗ ಎರಡು ಬಸ್ಗಳು ಮಾತ್ರ ಸಂಚಾರ ಮಾಡುತ್ತಿವೆ. ಇದರಿಂದ ವಿದ್ಯಾರ್ಥಿಗಳು ಕಾಲೇಜಿಗೆ ಹೋಗಲು, ಜಮಖಂಡಿಗೆ ತೆರಳುವುದಕ್ಕೆ ತೊಂದರೆ ಉಂಟಾಗುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು, ಪಾಲಕರು ರಸ್ತೆ ತಡೆದು ಟಯರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಈ ಬಗ್ಗೆ ಅಧಿಕಾರಿಗಳ ಗಮನಕ್ಕೂ ತಂದರೂ ಪ್ರಯೋಜನವಾಗಿಲ್ಲ. ಇಂತಹ ಸಮಸ್ಯೆ ಬಗ್ಗೆ ಜಮಖಂಡಿ ಘಟಕದ ವ್ಯವಸ್ಥಾಪಕ ಸಂಗಮೇಶ ಮಠೋಳಿ ಅವರ ಗಮನಕಿದ್ದರೂ ಸಮರ್ಪಕ ಬಸ್ಗಳ ಸಂಚಾರಕ್ಕೆ ಕ್ರಮಕೈಗೊಳ್ಳಲು ವಿಫಲರಾಗಿದ್ದಾರೆ. ಕೂಡಲೇ ಹೆಚ್ಚಿನ ಸಂಖ್ಯೆಯ ಬಸ್ಗಳ ಸಂಚಾರಕ್ಕೆ ವ್ಯವಸ್ಥೆ ಮಾಡುವಂತೆ ಆಗ್ರಹಿಸಿದರು.
ಸಂಬಂಧಪಟ್ಟ ಅಧಿಕಾರಿಗಳು ದೂರವಾಣಿ ಮೂಲಕ ಭರವಸೆ ನೀಡಿದ ಬಳಿಕ ಪ್ರತಿಭಟನೆಗೆ ಹಿಂಪಡೆಯಲಾಯಿತು.