ETV Bharat / state

ಸರ್ಕಾರದ ವಿರುದ್ಧ ಶಾಸಕ ಆನಂದ ನ್ಯಾಮಗೌಡ ನೇತೃತ್ವದಲ್ಲಿ ಪ್ರತಿಭಟನೆ

ಪ್ರವಾಹ ಪೀಡಿತರ ಕಷ್ಟಗಳಿಗೆ ಸರಿಯಾಗಿ ಸ್ಪಂದಿಸದಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಇಂದು ಜಮಖಂಡಿ ನಗರದಲ್ಲಿ ಬೃಹತ್ ಪಾದಯಾತ್ರೆ ನಡೆಸುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು.

author img

By

Published : Sep 13, 2019, 8:16 PM IST

ಆನಂದ ನ್ಯಾಮಗೌಡ ನೇತೃತ್ವದಲ್ಲಿ ಪ್ರತಿಭಟನೆ

ಜಮಖಂಡಿ: ಕಳೆದ ತಿಂಗಳಲ್ಲಿ ಕೃಷ್ಣೆಯ ಪ್ರವಾಹದಿಂದಾಗಿ ಈ ಭಾಗದ ಸಾವಿರಾರು ಜನರು ಮನೆ, ಆಸ್ತಿ, ಜಾನುವಾರುಗಳನ್ನು ಕಳೆದುಕೊಂಡಿದ್ದು, ರಾಜ್ಶ ಸರ್ಕಾರ ಇದುವರೆಗೂ ಸರಿಯಾದ ರೀತಿಯಲ್ಲಿ ಪರಿಹಾರ ನೀಡಿಲ್ಲ. ಪ್ರವಾಹ ಪೀಡಿತರ ಕಷ್ಟಗಳಿಗೆ ಸರಿಯಾಗಿ ಸ್ಪಂದಿಸದಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಇಂದು ಜಮಖಂಡಿ ನಗರದಲ್ಲಿ ಬೃಹತ್ ಪಾದಯಾತ್ರೆ ನಡೆಸುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು.

ಜಮಖಂಡಿ ಕ್ಷೇತ್ರದ ಶಾಸಕ ಆನಂದ ನ್ಯಾಮಗೌಡ ನೇತೃತ್ವದಲ್ಲಿ ಹಮ್ಮಿಕೊಳ್ಳಲಾದ ಈ ಪ್ರತಿಭಟನೆ, ಹನುಮಾನ ಚೌಕ, ಪೋಸ್ಟ್ ಚೌಕ್, ಸುವರ್ಣ ಥಿಯೇಟರ್ ಚೌಕ್ ಮೂಲಕ ದೇಸಾಯಿ ಸರ್ಕಲ್​ವರೆಗೆ ಸಾಗಿತು. ಬಳಿಕ ದೇಸಾಯಿ ಸರ್ಕಲ್​ನಲ್ಲಿ ಟೈರ್​ಗೆ ಬೆಂಕಿ ಹಚ್ಚಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನಾಕಾರರು ತಮ್ಮ ಆಕ್ರೋಶ ಹೊರಹಾಕಿದರು.

ಪ್ರತಿಭಟನೆಯ ನಂತರ ಜಮಖಂಡಿ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿ ಶೀಘ್ರವೇ ಪ್ರವಾಹ ಸಂತ್ರಸ್ತರಿಗೆ ಪರಿಹಾರ ಕೊಡಿಸುವಂತೆ ಒತ್ತಾಯಿಸಿ ಪ್ರತಿಭಟನೆಯನ್ನು ಕೈ ಬಿಟ್ಟರು.

Intro:ಜಮಖಂಡಿ ಕ್ಷೇತ್ರದ ಶಾಸಕ ಆನಂದ ನ್ಯಾಮಗೌಡ ನೇತೃತ್ವದಲ್ಲಿ ಪ್ರತಿಭಟನೆ, ಜಮಖಂಡಿ ನಗರದಲ್ಲಿ ರಾಜ್ಯ ಸರ್ಕಾರ ನೆರೆ ಸಂತ್ರಸ್ತರ ಪರಿಹಾರ ವಿತರಣೆಯಲ್ಲಿ ವಿಫಲ
Body: ಜಮಖಂಡಿ ಕ್ಷೇತ್ರದ ಶಾಸಕ ಆನಂದ ನ್ಯಾಮಗೌಡ ನೇತೃತ್ವದಲ್ಲಿ ಪ್ರತಿಭಟನೆ, ಜಮಖಂಡಿ ನಗರದಲ್ಲಿ ರಾಜ್ಯ ಸರ್ಕಾರ ನೆರೆ ಸಂತ್ರಸ್ತರ ಪರಿಹಾರ ವಿತರಣೆಯಲ್ಲಿ ವಿಫಲ

ಅಥಣಿ_

ಜಮಖಂಡಿ

ಕಳೆದ ಆಗಷ್ಟ್ ತಿಂಗಳಲ್ಲಿ ಕೃಷ್ಣೆಯ ಪ್ರವಾಹದಿಂದಾಗಿ ನಮ್ಮ ಭಾಗದ ಸಾವಿರಾರು ಜನರು ಮನೆ, ಆಸ್ತಿ, ಜಾನುವಾರುಗಳನ್ನು ಕಳೆದುಕೊಂಡಿದ್ದು, ರಾಜ್ಶ ಸರ್ಕಾರ ಇದುವರೆಗೂ ಸರಿಯಾದ ರೀತಿಯಲ್ಲಿ ಪರಿಹಾರ ನೀಡುತ್ತಿಲ್ಲ. ಎಷ್ಟೋ ಕುಟುಂಬಗಳಿಗೆ ಪರಿಹಾರದ ಹಣ (ರೂ.10,000/-) ಇನ್ನೂ ದೊರೆತಿಲ್ಲ. ಪರಿಹಾರ ವಿತರಣೆಯ ಬಗ್ಗೆ ವಿಳಂಬಮಾಡುತ್ತಿರುವ ಮತ್ತು ಪ್ರವಾಹ ಪಿಡಿತರ ಕಷ್ಟಗಳಿಗೆ ಸರಿಯಾಗಿ ಸ್ಪಂದಿಸದಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ನಾಳೆ ಇಂದು ಜಮಖಂಡಿ ನಗರದಲ್ಲಿ ಬೃಹತ್ ಪಾದಯಾತ್ರೆ ನಡೆಸುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರೂ

ಹಳೆ ತಹಶೀಲ್ದಾರ ಕಛೇರಿ ಆವರಣದಲ್ಲಿ ಕಾಂಗ್ರೆಸ್ ಸದಸ್ಯರು ಸೇರಿ. ಆಲ್ಲಿಂದ ಹನುಮಾನ ಚೌಕ, ಪೋಸ್ಟ್ ಚೌಕ್, ಸುವರ್ಣ ಥೀಯಟರ್ ಚೌಕ್ ಮೂಲಕ ದೇಸಾಯಿ ಸರ್ಕಲ್ ವರೆಗೆ ಪಾದಯಾತ್ರೆ ಕೈಗೊಂಡು ದೇಸಾಯಿ ಸರ್ಕಲ್ ನಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು

ನಂತರ ಜಮಖಂಡಿ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿ ಪ್ರತಿಭಟನೆಯನ್ನು ಕೈ ಬಿಟ್ಟುರು

Conclusion:ಶಿವರಾಜ್ ನೇಸರ್ಗಿ ಅಥಣಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.