ಬಾಗಲಕೋಟೆ: ಸಿಎಎ ಹಾಗೂ ಎನ್ಆರ್ಸಿ ಕಾಯ್ದೆ ಜಾರಿಗೆ ತರುತ್ತಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಭಾರತ ದೇಶದವರಲ್ಲ. ಅವರ ರಕ್ತ ತಪಾಸಣೆ ಮಾಡಬೇಕು ಎಂದು ಕಾಂಗ್ರೆಸಿನ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಇಲಕಲ್ ಪಟ್ಟಣದಲ್ಲಿ ಸಿಎಎ ಹಾಗೂ ಎನ್ಆರ್ಸಿ ವಿರೋಧಿಸಿ ವಿವಿಧ ಮುಸ್ಲಿಂ ಸಂಘಟನೆಗಳು ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೋದಿ ಹಾಗೂ ಅಮಿತ್ ಶಾ ಆಸ್ಟ್ರೇಲಿಯಾದಿಂದ ಬಂದಿದ್ದಾರೆ. ಹೀಗಾಗಿ, ಅವರ ರಕ್ತ ತಪಾಸಣೆ ಮಾಡಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಇದಕ್ಕೂ ಮೊದಲು ಮುಷ್ಕರನಿರತರು ಬಸವೇಶ್ವರ ವೃತ್ತದಿಂದ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಕಂಠಿ ವೃತ್ತ ಮಾರ್ಗವಾಗಿ ಅಂಜುಮನ್ ಮೈದಾನದವರೆಗೆ ನಡೆಸಿದರು. ಪೌರತ್ವ ಕಾಯ್ದೆ, ಎನ್ಆರ್ಸಿ, ಪ್ರಧಾನಿ ಮೋದಿ, ಗೃಹ ಸಚಿವ ಅಮಿಶ್ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ತಮ್ಮ ವಿವಿಧ ಬೇಡಿಕೆ ಇರುವ ಮನವಿ ಪತ್ರವನ್ನು ಪ್ರತಿಭಟನಾಕಾರರು ತಹಶೀಲ್ದಾರರಿಗೆ ನೀಡಿದರು.