ETV Bharat / state

ಬಾಗಲಕೋಟೆಯಾದ್ಯಂತ ಜಡಿಮಳೆ: ರಬಕವಿ-ಬನಹಟ್ಟಿಯ 111 ಮನೆಗಳಿಗೆ ಹಾನಿ

ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಕೃಷಿ ಜಮೀನು ಸೇರಿದಂತೆ ಹಲವಾರು ರಸ್ತೆಗಳು ಜಲಾವೃತಗೊಂಡಿವೆ. ರಬಕವಿ, ಬನಹಟ್ಟಿ ತಾಲೂಕಿನ 100ಕ್ಕೂ ಅಧಿಕ ಮನೆಗಳು ಹಾನಿಗೊಳಗಾಗಿವೆ.

Rain Lashed in Bagalkote
ಭೀಕರ ಮಳೆಗೆ ಹಾನಿಗೊಳಗಾದ ಮನೆಗಳು
author img

By

Published : Oct 15, 2020, 1:01 PM IST

ಬಾಗಲಕೋಟೆ: ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ವರುಣನ ಅಬ್ಬರ ಜೋರಾಗಿದ್ದು, ರಬಕವಿ ಬನಹಟ್ಟಿ ತಾಲೂಕು ವ್ಯಾಪ್ತಿಯಲ್ಲಿನ 111 ಮನೆಗಳಿಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ.

ಬಾಗಲಕೋಟೆ ನಗರ ಸೇರಿದಂತೆ ವಿವಿಧ ತಾಲೂಕುಗಳಲ್ಲಿ ಸುರಿಯುತ್ತಿರುವ ಭೀಕರ ಮಳೆಯಿಂದಾಗಿ ಕೆರೆ ಕಟ್ಟೆಗಳೆಲ್ಲಾ ತುಂಬಿ ಹರಿಯುತ್ತಿರುವ ಪರಿಣಾಮ ಫಸಲಿಗೆ ಬಂದ ಬೆಳೆ ಸಮೇತ ಕೃಷಿ ಭೂಮಿಯೂ ನೀರು ಪಾಲಾಗಿದೆ. ಜಿಲ್ಲೆಯಾದ್ಯಂತ ಸಂಚಾರ ಸೇರಿದಂತೆ ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದ್ದು, ವಾಸಿಸಲು ಸೂಕ್ತ ಸ್ಥಳ ಹುಡುಕಿಕೊಳ್ಳುವ ಪರಿಸ್ಥಿತಿ ಎದುರಾಗಿದೆ.

ಭೀಕರ ಮಳೆಗೆ ಹಾನಿಗೊಳಗಾದ ಮನೆಗಳು, ಸಂತ್ರಸ್ತರ ಅಳಲು

ವರುಣನ ಅಬ್ಬರಕ್ಕೆ ರಬಕವಿ ಬನಹಟ್ಟಿ ತಾಲೂಕು ಸಂಪೂರ್ಣ ಸ್ತಬ್ಧವಾಗಿದ್ದು, ಪ್ರಾಥಮಿಕ ವರದಿ ಪ್ರಕಾರ ಮೂರು ದಿನಗಳಲ್ಲಿ 111 ಮನೆಗಳಿಗೆ ಹಾನಿಯಾಗಿದೆ ಎಂದು ತಹಶೀಲ್ದಾರ್​​ ಪ್ರಶಾಂತ ಚನಗೊಂಡ ತಿಳಿಸಿದ್ದಾರೆ.

ಮುಂದಿನ ಮೂರು ದಿನಗಳ ಕಾಲ ಜಿಲ್ಲಾದ್ಯಂತ ಮಳೆ ಆಗಲಿರುವ ಪರಿಣಾಮ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ನದಿ ದಡದಲ್ಲಿರುವ ಹಾಗೂ ಮಣ್ಣಿನ ಮನೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.