ಬಾಗಲಕೋಟೆ : ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಣಿಕೆ ಮಾಡುತ್ತಿದ್ದ ಲಾರಿಯನ್ನು ಆಹಾರ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ.
ನವನಗರ ಎಪಿಎಂಸಿ ಆವರಣದಲ್ಲಿ ಸರ್ಕಾರದ ವಿವಿಧ ಯೋಜನೆಗೆ ವಿತರಿಸಬೇಕಾದ ಅಪಾರ ಪ್ರಮಾಣದ ಅಕ್ಕಿಯನ್ನು ಲಾರಿ ಸಮೇತ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಓದಿ-ಮಹಿಳಾ ಸದಸ್ಯೆ ನೂಕಾಟ ಪ್ರಕರಣ: ಸಿದ್ದು ಸವದಿ ವಿರುದ್ಧ ಸಿದ್ದರಾಮಯ್ಯ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
ಮತ್ತೊಂದೆಡೆ, ಮುಚಖಂಡಿ ಗ್ರಾಮದಲ್ಲಿ 14 ಕ್ವಿಂಟಾಲ್ ಅಕ್ಕಿಯನ್ನು ಸಂಗ್ರಹಣೆ ಮಾಡಿದ್ದ ಕೇಂದ್ರದ ಮೇಲೆ ದಾಳಿ ಮಾಡಿ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ಅವಶ್ಯಕ ವಸ್ತುಗಳ ಕಾಯ್ದೆಯಡಿ ಎರಡು ಪ್ರಕರಣ ದಾಖಲು ಮಾಡಿ ತನಿಖೆ ನಡೆಸಲಾಗಿದೆ ಎಂದು ಆಹಾರ ಇಲಾಖೆಯ ಉಪ ನಿರ್ದೇಶಕ ಶ್ರೀಶೈಲ ಕಂಕಣವಾಡಿ ತಿಳಿಸಿದ್ದಾರೆ.