ಬಾಗಲಕೋಟೆ: ಕಾರ್ಮಿಕ ಇಲಾಖೆ, ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಕೋವಿಡ್-19 ಸೋಂಕು ತಡೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಜಿಲ್ಲಾ ಪಂಚಾಯತ್ ಸಿಇಒ ಗಂಗೂಬಾಯಿ ಮಾನಕರ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪ ವಿಭಾಗಾಧಿಕಾರಿ ಎಂ.ಗಂಗಪ್ಪ ಜಂಟಿಯಾಗಿ ಚಾಲನೆ ನೀಡಿದರು.
ಜಿಲ್ಲಾಡಳಿತ ಭವನದ ಮುಖ್ಯ ದ್ವಾರದಲ್ಲಿ ಶುಕ್ರವಾರ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಜಿಪಂ ಸಿಇಒ ಗಂಗೂಬಾಯಿ ಮಾನಕರ, 6 ವಾಹನಗಳ ಮೂಲಕ ಜಿಲ್ಲೆಯಾದ್ಯಂತ ಸಂಚರಿಸುವ ಮೂಲಕ ಜನರಲ್ಲಿ ಮಹಾಮಾರಿ ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮ, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಕುರಿತು ಹಾಗೂ ಸ್ವಚ್ಛತೆ ಬಗ್ಗೆ ಧ್ವನಿವರ್ಧಕ ಮತ್ತು ಜಾಗೃತಿಯ ಕರಪತ್ರಗಳನ್ನು ಹಂಚುವ ಮೂಲಕ ಜಾಗೃತಿ ಮೂಡಿಸಲಿದ್ದಾರೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಸುಳ್ಳೊಳ್ಳಿ, ನಗರಸಭೆ ಪೌರಾಯುಕ್ತ ಮುನಿಶಾಮಪ್ಪ, ಜಿಲ್ಲಾ ಕಾರ್ಮಿಕ ಅಧಿಕಾರಿ ಬಿ.ಆರ್.ಜಾಧವ, ಭಾರತೀಯ ರೆಡ್ ಕ್ರಾಸ್‍ನ ಆನಂದ ಜಿಗಜಿನ್ನಿ, ವೀರಣ್ಣ ಅಥಣಿ, ರವಿ ಕುಮಟಗಿ, ಪ್ರವೀಣ ಹಿರೇಕುಂಬಿ, ಸಿ.ಬಿ.ಸೋಲಾಪೂರ, ವಿನೋದ ಪಾಗದ ಸೇರಿದಂತೆ ಇತರರು ಉಪಸ್ಥಿತರಿದ್ದರು.