ಬಾಗಲಕೋಟೆ: ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಜಿಲ್ಲೆಯ ಬಾದಾಮಿ ಪಟ್ಟಣದಲ್ಲಿರುವ ಮಹಾಕೂಟೇಶ್ವರ ಹಿರಿಯ ಪ್ರಾಥಮಿಕ ಶಾಲೆ ಆಡಳಿತ ಮಂಡಳಿಯವರು ಗೌರವ ಸಲ್ಲಿಸಿದರು.
ಶಾಲೆಯಲ್ಲಿರುವ ಎಲ್ಲಾ ಮಕ್ಕಳಿಗೆ ಸೈನಿಕರ ಡ್ರೇಸ್ನ್ನು ಹಾಕಿಸಿ ಇಡೀ ಪಟ್ಟಣದಲ್ಲಿ ಮೆರವಣಿಗೆ ನಡೆಸಿದರು. ಈ ಮೂಲಕ ದೇಶ, ಯೋಧರ ಬಗ್ಗೆ ಭಕ್ತಿ ಹಾಗೂ ಗೌರವ ಸಲ್ಲಿಸಿದರು. ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯನ್ನು ದಾಳಿ ಖಂಡಿಸಿ ಉಗ್ರರ ವಿರುದ್ಧ ಘೋಷಣೆ ಕೂಗಿದರು.
ಭಾರತ ಮಾತಾಕೀ ಜೈ ಎಂಬ ಘೋಷಣೆ ಕೂಗಿ, ರಾಷ್ಟ್ರ ಗೀತೆ ಹಾಡುವ ಮೂಲಕ ಹುತಾತ್ಮರಾದ ವೀರ ಯೋಧರಿಗೆ ಗೌರವ ನಮನ ಸಲ್ಲಿಸಿದರು.