ETV Bharat / state

ಸಿದ್ದರಾಮಯ್ಯ ಶೀಘ್ರ ಗುಣಮುಖರಾಗಲಿ: ಬಾದಾಮಿ ಬನಶಂಕರಿ ದೇವಿಗೆ ವಿಶೇಷ ಪೂಜೆ - Badami Banashankari Temple

ಮಾಜಿ ಸಿಎಂ ಸಿದ್ದರಾಮಯ್ಯಗಾಗಿ ರಾಜ್ಯದ ಹಲವೆಡೆ ಕಾರ್ಯಕರ್ತರು ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸುತ್ತಿದ್ದಾರೆ. ಇದೀಗ ಸ್ವಕ್ಷೇತ್ರ ಬಾದಾಮಿಯ ಬನಶಂಕರಿ ದೇವಾಲಯದಲ್ಲಿ ಕಾರ್ಯಕರ್ತರು ಪೂಜೆ ಸಲ್ಲಿಸಿ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

Special worship to the Banashankari of Badami for speedy recovery of Siddaramaiah
ಸಿದ್ದರಾಮಯ್ಯ ಶೀಘ್ರ ಗುಣಮುಖರಾಗಲಿ ಎಂದು ಬಾದಾಮಿಯ ಬನಶಂಕರಿಗೆ ವಿಶೇಷ ಪೂಜೆ
author img

By

Published : Aug 4, 2020, 6:09 PM IST

ಬಾಗಲಕೋಟೆ: ಬಾದಾಮಿ ಕ್ಷೇತ್ರದ ಶಾಸಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊರೊನಾದಿಂದ ಶೀಘ್ರವಾಗಿ ಗುಣಮುಖರಾಗುವಂತೆ ಬಾದಾಮಿ ಬನಶಂಕರಿ ದೇವಿಗೆ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು.

ಪ್ರತಿಪಕ್ಷದ ನಾಯಕರಾಗಿ ರಚನಾತ್ಮಕ ಕಾರ್ಯಗಳಿಂದ ಸದಾ ಕ್ರಿಯಾಶೀಲರಾಗಿರುವ ಸಿದ್ದರಾಮಯ್ಯನವರು ಆದಷ್ಟು ಬೇಗ ಕೋವಿಡ್‌ನಿಂದ ಗುಣಮುಖರಾಗುವಂತೆ ಬನಶಂಕರಿ ದೇವಿಗೆ ಅಭಿಷೇಕ ಮಾಡುವುದರ ಮೂಲಕ ಪ್ರಾರ್ಥನೆ ಸಲ್ಲಿಸಿದರು. ಸಿದ್ದರಾಮಯ್ಯನವರ ಆಪ್ತರಾದ ಹೊಳಬಸು ಶೆಟ್ಟರ್​​​ ನೇತೃತ್ವದಲ್ಲಿ ಕಾರ್ಯಕರ್ತರು ಬನಶಂಕರಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ಸಿದ್ದರಾಮಯ್ಯ ಶೀಘ್ರ ಗುಣಮುಖರಾಗಲಿ ಎಂದು ಬಾದಾಮಿಯ ಬನಶಂಕರಿಗೆ ವಿಶೇಷ ಪೂಜೆ

ಈ ಸಮಯದಲ್ಲಿ ಪಿ.ಆರ್.ಗೌಡರ್​, ಮಲ್ಲಣ್ಣ ಯಲಿಗಾರ, ರಾಜು ಚಿಮ್ಮನಕಟ್ಟಿ, ಮಹೇಶ ಹೊಸಗೌಡರ, ರೇವಣಸಿದ್ದಪ್ಪ ನೋಟಗಾರ ಸೇರಿ ಹಲವು ಮುಖಂಡರು, ಕಾರ್ಯಕರ್ತರು ಭಾಗಿಯಾಗಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.