ಬಾಗಲಕೋಟೆ : ಸರ್ಕಾರಿ ನೌಕರರು ದಿನನಿತ್ಯದ ಒತ್ತಡದ ಕೆಲಸದಿಂದ ಹೊರಬರಲು ಕ್ರೀಡೆಗಳು ಅವಶ್ಯವಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ. ರಾಜೇಂದ್ರ ಪ್ರತಿಪಾದಿಸಿದ್ದಾರೆ.
ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾಘಟಕದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ಸರಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರಕಾರಿ ನೌಕರಿ ಎಂಬುದು ಬಿಡುವಿಲ್ಲದ ಕೆಲಸವಾಗಿದ್ದು, ಇಂತಹ ಒತ್ತಡದ ಬದುಕಿನಲ್ಲಿ ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ, ಮುಂದಿನ ದಿನಗಳಲ್ಲಿ ವಿವಿಧ ಇಲಾಖೆಗಳ ನಡುವೆ ಕ್ರಿಕೇಟ್ ಟೂರ್ನಮೆಂಟ್ ಆಯೋಜಿಸಲು ಅಧಿಕಾರಿಗಳಿಗೆ ತಿಳಿಸಿದರು.
ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಎಂ.ಬಿ.ಬಳ್ಳಾರಿ ಮಾತನಾಡಿ, ಕ್ರೀಡೆಯಿಂದ ಆರೋಗ್ಯ ಮತ್ತುಆಯುಷ್ಯ ವೃದ್ಧಿಯಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಎನ್ ಮೂಲಿಮನಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಭಾರಿ ಸಹಾಯಕ ನಿರ್ದೇಶಕ ಬಸವರಾಜ ಶಿರೂರ, ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ ಭಾಗ್ಯನ್ನವರ್ ಸೇರಿದಂತೆ ಇತರರು ಇದ್ದರು.