ಬಾಗಲಕೋಟೆ : ಜಿಲ್ಲಾ ಕೋವಿಡ್ ಆಸ್ಪತ್ರೆಯ ಕೊರೊನಾ ಚಿಕಿತ್ಸಾ ವಾರ್ಡ್ಗಳಿಗೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಿನ್ನೆ ಕೋವಿಡ್ ಆಸ್ಪತ್ರೆ ಉಪಹಾರದಲ್ಲಿ ಹುಳು, ಜಿರಲೆ ಇರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಸಂಜೆ ಆಸ್ಪತ್ರೆಯ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿದ ಅವರು, ಕೋವಿಡ್ ರೋಗಿಗಳ ಆರೋಗ್ಯ ವಿಚಾರಿಸಿ ಆತ್ಮಸ್ಥೈರ್ಯ ತುಂಬಿದರು.
ಈ ವೇಳೆ ಮಾತನಾಡಿದ ಎಸ್.ಆರ್. ಪಾಟೀಲ, ಕೋವಿಡ್ ಆಸ್ಪತ್ರೆಯಲ್ಲಿ ಎಲ್ಲವೂ ಸರಿಯಿಲ್ಲ ಎಂಬ ದೂರು ಬಂದಿತ್ತು. ಹೀಗಾಗಿ ಆಸ್ಪತ್ರೆಗೆ ಭೇಟಿ ನೀಡಿದ್ದೇನೆ. ರೋಗಿಗಳಿಂದ ನನಗೆ ಕೆಲ ಸಣ್ಣಪುಟ್ಟ ದೂರುಗಳು ಬಂದ ಹಿನ್ನೆಲೆಯಲ್ಲಿ ವೈದ್ಯರಿಗೆ ಕೆಲ ಸಲಹೆಗಳನ್ನು ನೀಡಿದ್ದೇನೆ ಎಂದರು.